Exodus 10:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಮೋಶೆ ಆರೋನರು ಫರೋಹನ ಬಳಿಗೆ ಹೋಗಿ, “ಇಬ್ರಿಯರ ದೇವರಾದ ಯೆಹೋವನು ಹೀಗೆನ್ನುತ್ತಾನೆ: ‘ನೀನು ಎಲ್ಲಿಯವರೆಗೆ ನನಗೆ ವಿಧೇಯನಾಗುವುದಿಲ್ಲ? ನನ್ನನ್ನು ಆರಾಧಿಸಲು ನನ್ನ ಜನರನ್ನು ಕಳುಹಿಸಿಕೊಡು!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆ ಮತ್ತು ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ, “ಇಬ್ರಿಯರ ದೇವರಾಗಿರುವ ಯೆಹೋವನು ಆಜ್ಞಾಪಿಸುವುದೇನೆಂದರೆ, ‘ನೀನು ನನ್ನ ಮುಂದೆ ತಗ್ಗಿಸಿಕೊಳ್ಳದೆ ಇರುವುದು ಇನ್ನು ಎಲ್ಲಿಯವರೆಗೆ? ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆ ಕೊಡು.
Kannada BSI Bible 2016
ಮೋಶೆ ಆರೋನರು ಫರೋಹನ ಬಳಿಗೆ ಬಂದು ಅವನಿಗೆ--ಇಬ್ರಿಯರ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನ ಸನ್ನಿಧಿಯಲ್ಲಿ ತಗ್ಗಿಸಿಕೊಳ್ಳದೆ ಇರುವದು ಎಲ್ಲಿಯವರೆಗೇ? ನನ್ನನ್ನು ಸೇವಿಸುವಂತೆ ನನ್ನ ಜನರನ್ನು ಹೋಗಗೊಡಿಸು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆ ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ - ಇಬ್ರಿಯರ ದೇವರಾಗಿರುವ ಯೆಹೋವನು ಆಜ್ಞಾಪಿಸುವದೇನಂದರೆ - ನೀನು ನನ್ನ ಮುಂದೆ ತಗ್ಗಿಸಿಕೊಳ್ಳದೆ ಇರುವದು ಇನ್ನು ಎಲ್ಲಿಯವರೆಗೋ? ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆ ಕೊಡು.
Kannada Bible (KNCL) BSI 2016
ಮೋಶೆ ಮತ್ತು ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ, \ಹಿಬ್ರಿಯರ ದೇವರಾಗಿರುವ ಸರ್ವೇಶ್ವರನ ಮಾತುಗಳಿವು: ‘ಎಲ್ಲಿಯವರೆಗೆ ನೀನು ನನಗೆ ತಲೆ ತಗ್ಗಿಸದಿರುವೆ? ನನ್ನನ್ನು ಆರಾಧಿಸ ಹೋಗಲು ನನ್ನ ಜನರಿಗೆ ಅಪ್ಪಣೆ ಕೊಡು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆ ಆರೋನರು ಫರೋಹನ ಬಳಿಗೆ ಬಂದು ಅವನಿಗೆ, “ಹಿಬ್ರಿಯರ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ನನ್ನ ಸನ್ನಿಧಿಯಲ್ಲಿ ನೀನು ಎಷ್ಟು ಕಾಲ ತಲೆ ತಗ್ಗಿಸದಿರುವೆ? ನನ್ನನ್ನು ಆರಾಧಿಸುವಂತೆ ನನ್ನ ಜನರನ್ನು ಹೋಗಗೊಡಿಸು.