Exodus 10:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪ್ರಿಯತಮತೆಗಳು ಬಂದು ಭೂಮಿಯನ್ನು ಮುಚ್ಚಿಕೊಳ್ಳುವವು; ನೆಲವೇ ಕಾಣಿಸದೆ ಹೋಗುವುದು. ಆಲಿಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿರುವುದನ್ನು ಪ್ರಿಯತಮತೆಗಳು ತಿಂದುಬಿಡುತ್ತವೆ; ಹೊಲದಲ್ಲಿರುವ ಎಲ್ಲಾ ಮರಗಳ ಎಲೆಗಳನ್ನು ತಿಂದುಬಿಡುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವು ಭೂಮಿಯನ್ನೆಲ್ಲಾ ಆವರಿಸಿಕೊಳ್ಳುವವು. ನೆಲವೇ ಕಾಣಿಸದೆ ಹೋಗುವುದು. ಆನೆಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿದ್ದೆಲ್ಲವನ್ನು ಮಿಡತೆಗಳು ತಿಂದುಬಿಡುವವು. ಹೊಲದಲ್ಲಿರುವ ನಿಮ್ಮ ಎಲ್ಲಾ ಮರಗಳ ಎಲೆ ಚಿಗುರುಗಳನ್ನೂ ತಿಂದುಬಿಡುವವು.
Kannada BSI Bible 2016
ಒಬ್ಬನು ಭೂಮಿಯನ್ನು ಕಾಣುವದಕ್ಕಾಗದಷ್ಟು ಅವು ಭೂಮುಖವನ್ನೆಲ್ಲಾ ಮುಚ್ಚಿಕೊಳ್ಳುವವು; ಇದ ಲ್ಲದೆ ಅವು ಆನೆಕಲ್ಲಿನ ಮಳೆಯಿಂದ ಹಾಳಾಗದೆ ನಿಮಗಾಗಿ ಉಳಿದಿರುವದೆಲ್ಲವನ್ನೂ ಹೊಲಗಳಲ್ಲಿ ಚಿಗುರಿರುವ ಪ್ರತಿಯೊಂದು ಮರವನ್ನೂ ತಿಂದುಬಿಡು ವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವು ಭೂವಿುಯನ್ನೆಲ್ಲಾ ಮುಚ್ಚಿಕೊಳ್ಳುವವು; ನೆಲವೇ ಕಾಣಿಸದೆ ಹೋಗುವದು. ಆನೆಕಲ್ಲಿನ ಮಳೆಯಿಂದ ನಾಶವಾಗದೆ ಉಳಿದದ್ದೆಲ್ಲವನ್ನು ವಿುಡಿತೆಗಳು ತಿಂದುಬಿಡುವವು; ಹೊಲದಲ್ಲಿರುವ ನಿಮ್ಮ ಎಲ್ಲಾ ಮರಗಳ ಎಲೆಚಿಗುರುಗಳನ್ನೂ ತಿಂದು ಬಿಡುವವು.
Kannada Bible (KNCL) BSI 2016
ನೆಲ ಕರ್ರಗೆ ಕಾಣಿಸುವಷ್ಟು ಅವು ಭೂಮಿಯನ್ನೆಲ್ಲಾ ಆವರಿಸಿಕೊಳ್ಳುವುವು; ಆನೆಕಲ್ಲಿನ ಮಳೆಯಿಂದ ನಾಶ ಆಗದೆ ಉಳಿದದ್ದೆಲ್ಲವನ್ನು ಮಿಡತೆಗಳು ತಿಂದುಬಿಡುವವು. ಹೊಲದಲ್ಲಿರುವ ನಿಮ್ಮ ಎಲ್ಲ ಮರಗಳ ಎಲೆಚಿಗುರುಗಳನ್ನು ತಿಂದುಬಿಡುವುವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಬ್ಬನು ಭೂಮಿಯನ್ನು ಕಾಣುವುದಕ್ಕಾಗದಷ್ಟು ಅವು ಭೂಮಿಯನ್ನೆಲ್ಲಾ ಮುಚ್ಚಿಕೊಳ್ಳುವುವು. ಇದಲ್ಲದೆ ಅವು ಆಲಿಕಲ್ಲಿನ ಮಳೆಯಿಂದ ಹಾಳಾಗದೆ ನಿಮಗಾಗಿ ಉಳಿದಿರುವುದೆಲ್ಲವನ್ನೂ, ಹೊಲಗಳಲ್ಲಿ ಚಿಗುರಿರುವ ಪ್ರತಿಯೊಂದು ಮರವನ್ನೂ ತಿಂದುಬಿಡುವುವು.