Exodus 10:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವು ನಿನ್ನ ಮನೆಗಳಲ್ಲಿಯೂ ನಿನ್ನ ಅಧಿಕಾರಿಗಳ ಮನೆಗಳಲ್ಲಿಯೂ ಈಜಿಪ್ಟಿನ ಎಲ್ಲಾ ಮನೆಗಳಲ್ಲಿಯೂ ತುಂಬಿರುತ್ತವೆ. ನಿನ್ನ ತಂದೆತಾತಂದಿರೂ ನೋಡಿಲ್ಲದಷ್ಟು ಪ್ರಿಯತಮತೆಗಳಿರುತ್ತವೆ”‘ ಎಂದು ಹೇಳಿದರು. ಬಳಿಕ ಅವರು ಫರೋಹನ ಬಳಿಯಿಂದ ಹೊರಟುಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವು ನಿನ್ನ ಮನೆಗಳಲ್ಲಿಯೂ, ನಿನ್ನ ಪರಿವಾರದವರ ಮನೆಗಳಲ್ಲಿಯೂ, ಐಗುಪ್ತ್ಯರೆಲ್ಲರ ಮನೆಗಳಲ್ಲಿಯೂ ತುಂಬಿಕೊಂಡಿರುವವು. ನಿಮ್ಮ ಪೂರ್ವಿಕರ ಕಾಲದಿಂದ ಇಂದಿನವರೆಗೂ ಅಂಥ ಮಿಡತೆಯ ದಂಡನ್ನು ಎಂದೂ ಅವರು ನೋಡಿರುವುದಿಲ್ಲ’” ಎಂದು ಹೇಳಿದರು. ಇದನ್ನು ಹೇಳಿ ಮೋಶೆ ತಿರುಗಿಕೊಂಡು ಫರೋಹನ ಬಳಿಯಿಂದ ಹೊರಟುಹೋದನು.
Kannada BSI Bible 2016
ಇದಲ್ಲದೆ ಅವು ನಿನ್ನ ಮನೆಗಳಲ್ಲಿಯೂ ನಿನ್ನ ಸೇವಕರ ಮನೆಗಳಲ್ಲಿಯೂ ಐಗುಪ್ತ್ಯರೆಲ್ಲರ ಮನೆ ಗಳಲ್ಲಿಯೂ ತುಂಬಿಕೊಳ್ಳುವವು. ನಿನ್ನ ತಂದೆಗಳಾಗಲಿ ನಿನ್ನ ತಂದೆಗಳ ತಂದೆಗಳಾಗಲಿ ಅವರು ಭೂಮಿಯ ಮೇಲೆ ಇದ್ದಂದಿನಿಂದ ಇಂದಿನ ವರೆಗೂ ಅಂಥದ್ದನ್ನು ಎಂದೂ ನೋಡಿರಲಿಲ್ಲ ಅಂದನು. ಮೋಶೆಯು ಹಿಂತಿರುಗಿ ಫರೋಹನ ಬಳಿಯಿಂದ ಹೊರಟು ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವು ನಿನ್ನ ಮನೆಗಳಲ್ಲಿಯೂ ನಿನ್ನ ಪರಿವಾರದವರ ಮನೆಗಳಲ್ಲಿಯೂ ಐಗುಪ್ತ್ಯರೆಲ್ಲರ ಮನೆಗಳಲ್ಲಿಯೂ ತುಂಬಿಕೊಂಡಿರುವವು. ನಿಮ್ಮ ತಂದೆತಾತಂದಿರು ಹುಟ್ಟಿದಂದಿನಿಂದ ಇಂದಿನವರೆಗೂ ಅಂಥ ವಿುಡಿತೇ ದಂಡನ್ನು ಎಂದೂ ನೋಡಿಲ್ಲ ಎಂದು ಹೇಳಿದರು. ಇದನ್ನು ಹೇಳಿ ಮೋಶೆ ತಿರುಗಿಕೊಂಡು ಫರೋಹನ ಬಳಿಯಿಂದ ಹೊರಟುಹೋದನು.
Kannada Bible (KNCL) BSI 2016
ನಿನ್ನ ಮನೆಗಳಲ್ಲೂ ನಿನ್ನ ಪರಿವಾರದವರ ಮನೆಗಳಲ್ಲೂ ಈಜಿಪ್ಟಿನವರ ಮನೆಗಳಲ್ಲೂ ಅವು ತುಂಬಿಕೊಳ್ಳುವುವು. ನಿಮ್ಮ ತಂದೆ ತಾತಂದಿರ ಕಾಲದಿಂದ ಇಂದಿನವರೆಗೂ ಅಂಥ ಮಿಡಿತೆದಂಡನ್ನು ಯಾರೂ ನೋಡಿಲ್ಲ.” ಹೀಗೆಂದು ಹೇಳಿ ಮೋಶೆ ಫರೋಹನ ಬಳಿಯಿಂದ ಹೊರಟುಹೋದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವು ನಿನ್ನ ಮನೆಗಳಲ್ಲಿಯೂ ನಿನ್ನ ಅಧಿಕಾರಿಗಳ ಮನೆಗಳಲ್ಲಿಯೂ ಈಜಿಪ್ಟಿನ ಎಲ್ಲಾ ಮನೆಗಳಲ್ಲಿಯೂ ತುಂಬಿಕೊಳ್ಳುವುವು. ನಿನ್ನ ತಂದೆ ಅಲ್ಲದೆ ನಿನ್ನ ತಂದೆಯ ತಂದೆಗಳಾಗಲಿ, ಭೂಮಿಯ ಮೇಲೆ ಇದ್ದಂದಿನಿಂದ ಇಂದಿನವರೆಗೂ ಅಂಥ ಮಿಡತೆಯ ದಂಡನ್ನು ಯಾರೂ ನೋಡಿಲ್ಲ,’ ” ಎಂದು ಮೋಶೆ ಹೇಳಿ ಫರೋಹನ ಬಳಿಯಿಂದ ಹೊರಟುಹೋದನು.