Exodus 10:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಫರೋಹನು ಮೋಶೆ ಆರೋನರನ್ನು ತನ್ನ ಬಳಿಗೆ ಕರೆಯಿಸಿ, “ಹೋಗಿ ನಿಮ್ಮ ದೇವರಾದ ಯೆಹೋವನನ್ನು ಆರಾಧಿಸಿರಿ. ಆದರೆ ಹೋಗುವವರು ಯಾರೆಂಬುದನ್ನು ನನಗೆ ತಿಳಿಸಿ” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದನ್ನು ಕೇಳಿ ಫರೋಹನು, ಮೋಶೆ ಮತ್ತು ಆರೋನರನ್ನು ತಿರುಗಿ ಕರೆಯಿಸಿ ಅವರಿಗೆ, “ನೀವು ಹೋಗಿ ನಿಮ್ಮ ದೇವರಾದ ಯೆಹೋವನನ್ನು ಆರಾಧಿಸಬಹುದು. ಆದರೆ ಯಾರಾರು ಹೋಗಬೇಕನ್ನುತ್ತೀರಿ?” ಎಂದು ಕೇಳಿದನು.
Kannada BSI Bible 2016
ಮೋಶೆ ಆರೋನರು ಫರೋಹನ ಬಳಿಗೆ ಮತ್ತೆ ಕರೆಯಲ್ಪಟ್ಟರು. ಆಗ ಅವರಿಗೆ--ನೀವು ಹೋಗಿ ನಿಮ್ಮ ದೇವರಾದ ಕರ್ತನಿಗೆ ಸೇವೆಮಾಡಿರಿ; ಆದರೆ ಹೋಗು ವವರು ಯಾರಾರು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದನ್ನು ಕೇಳಿ ಫರೋಹನು ಮೋಶೆ ಆರೋನರನ್ನು ತಿರಿಗಿ ಕರಿಸಿ ಅವರಿಗೆ - ನೀವು ಹೋಗಿ ನಿಮ್ಮ ದೇವರಾದ ಯೆಹೋವನನ್ನು ಆರಾಧಿಸಿ ಬರಬಹುದು; ಆದರೆ ಯಾರಾರು ಹೋಗಬೇಕನ್ನುತ್ತೀರಿ ಎಂದು ಕೇಳಲಾಗಿ
Kannada Bible (KNCL) BSI 2016
ಇದನ್ನು ಕೇಳಿದ ಫರೋಹನು ಮೋಶೆ ಮತ್ತು ಆರೋನರನ್ನು ಪುನಃ ಕರೆಸಿ, “ನೀವು ಹೋಗಿ ನಿಮ್ಮ ದೇವರಾದ ಸರ್ವೇಶ್ವರನನ್ನು ಆರಾಧಿಸಬಹುದು. ಆದರೆ ಯಾರ್ಯಾರು ಹೋಗಬೇಕೆನ್ನುತ್ತೀರಿ?” ಎಂದು ಕೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದುದರಿಂದ ಫರೋಹನು ಮೋಶೆ ಮತ್ತು ಆರೋನರನ್ನು ಪುನಃ ಕರೆಯಿಸಿ ಅವರಿಗೆ, “ನೀವು ಹೋಗಿ ನಿಮ್ಮ ದೇವರಾದ ಯೆಹೋವ ದೇವರಿಗೆ ಆರಾಧನೆ ಮಾಡಿರಿ, ಆದರೆ ಹೋಗುವವರು ಯಾರ‍್ಯಾರು?” ಎಂದು ಕೇಳಿದನು.