Exodus 11:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಫರೋಹನ ಹೃದಯವನ್ನು ಕಠಿಣಗೊಳಿಸಿದ್ದರಿಂದ ಫರೋಹನು ಇಸ್ರೇಲರನ್ನು ಕಳುಹಿಸಿಕೊಡಲಿಲ್ಲ; ಆದ್ದರಿಂದ ಮೋಶೆ ಆರೋನರು ಈ ಅದ್ಭುತಕಾರ್ಯಗಳನ್ನೆಲ್ಲಾ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆ ಮತ್ತು ಆರೋನರು ಫರೋಹನ ಮುಂದೆ ಆ ಮಹತ್ಕಾರ್ಯಗಳನ್ನೆಲ್ಲಾ ಮಾಡಿದರು. ಆದರೆ ಯೆಹೋವನು ಫರೋಹನ ಹೃದಯವನ್ನು ಕಠಿಣಮಾಡಿದ್ದರಿಂದ ಫರೋಹನು ಇಸ್ರಾಯೇಲರಿಗೆ ತನ್ನ ದೇಶವನ್ನು ಬಿಟ್ಟು ಹೋಗುವುದಕ್ಕೆ ಅಪ್ಪಣೆ ಕೊಡದೆ ಹೋದನು.
Kannada BSI Bible 2016
ಈ ಅದ್ಭುತ ಗಳನ್ನೆಲ್ಲಾ ಮೋಶೆ ಆರೋನರು ಫರೋಹನ ಮುಂದೆ ಮಾಡಿದರು. ಆದರೆ ಕರ್ತನು ಫರೋಹನ ಹೃದಯ ವನ್ನು ಕಠಿಣಮಾಡಿದ್ದರಿಂದ ಅವನು ಇಸ್ರಾಯೇಲ್‌ ಮಕ್ಕಳನ್ನು ತನ್ನ ದೇಶದೊಳಗಿಂದ ಕಳುಹಿಸಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆ ಆರೋನರು ಫರೋಹನ ಮುಂದೆ ಆ ಮಹತ್ಕಾರ್ಯಗಳನ್ನೆಲ್ಲಾ ಮಾಡಿದಾಗ್ಯೂ ಯೆಹೋವನು ಫರೋಹನ ಹೃದಯವನ್ನು ಕಠಿಣಮಾಡಿದ್ದದರಿಂದ ಫರೋಹನು ಇಸ್ರಾಯೇಲ್ಯರಿಗೆ ತನ್ನ ದೇಶವನ್ನು ಬಿಟ್ಟು ಹೊರಡುವದಕ್ಕೆ ಅಪ್ಪಣೆ ಕೊಡದೆಹೋದನು.
Kannada Bible (KNCL) BSI 2016
ಮೋಶೆ ಮತ್ತು ಆರೋನರು ಫರೋಹನ ಮುಂದೆ ಈ ಸೂಚಕಕಾರ್ಯಗಳನ್ನೆಲ್ಲಾ ಮಾಡಿದ್ದರೂ ಸರ್ವೇಶ್ವರ ಫರೋಹನ ಹೃದಯವನ್ನು ಕಲ್ಲಾಗಿಸಿದ್ದರು. ಅವನು ತನ್ನ ದೇಶವನ್ನು ಬಿಟ್ಟು ಹೊರಡುವುದಕ್ಕೆ ಇಸ್ರಯೇಲರಿಗೆ ಅಪ್ಪಣೆಕೊಡದೆ ಹೋದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಅದ್ಭುತಗಳನ್ನೆಲ್ಲಾ ಮೋಶೆ ಆರೋನರು ಫರೋಹನ ಮುಂದೆ ಮಾಡಿದರು. ಆದರೆ ಯೆಹೋವ ದೇವರು ಫರೋಹನ ಹೃದಯವನ್ನು ಕಠಿಣ ಮಾಡಿದ್ದರಿಂದ, ಅವನು ಇಸ್ರಾಯೇಲರನ್ನು ತನ್ನ ದೇಶದೊಳಗಿಂದ ಕಳುಹಿಸಲಿಲ್ಲ.