Exodus 11:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈಜಿಪ್ಟಿನವರು ನಿಮಗೆ ದಯೆತೋರುವಂತೆ ಯೆಹೋವನು ಅವರನ್ನು ಪ್ರೇರೇಪಿಸುವನು. ಈಜಿಪ್ಟಿನ ಜನರು ಮತ್ತು ಫರೋಹನ ಅಧಿಕಾರಿಗಳು ಮೋಶೆಯನ್ನು ಮಹಾಪುರುಷನೆಂದು ತಿಳಿದುಕೊಂಡಿದ್ದಾರೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಇಸ್ರಾಯೇಲರ ಮೇಲೆ ಐಗುಪ್ತ್ಯರಲ್ಲಿ ದಯೆಯನ್ನು ಹುಟ್ಟಿಸಿದನು. ಇದಲ್ಲದೆ ಐಗುಪ್ತ ದೇಶದಲ್ಲಿ ಫರೋಹನ ಪ್ರಜಾಪರಿವಾರದವರು ಹಾಗು ಜನರು ಮೋಶೆಯನ್ನು ಮಹಾಶ್ರೇಷ್ಠಪುರುಷನೆಂದು ಭಾವಿಸಿದರು.
Kannada BSI Bible 2016
ಇದಲ್ಲದೆ ಕರ್ತನು ಐಗುಪ್ತ್ಯರ ದೃಷ್ಟಿಯಲ್ಲಿ ಜನರಿಗೆ ದಯೆದೊರಕುವಂತೆ ಮಾಡಿದನು. ಆ ಮನುಷ್ಯನಾದ ಮೋಶೆಯು ಐಗುಪ್ತದೇಶದಲ್ಲಿಯೂ ಫರೋಹನ ಸೇವಕರ ದೃಷ್ಟಿಯಲ್ಲಿಯೂ ಜನರ ದೃಷ್ಟಿಯಲ್ಲಿಯೂ ಬಹು ದೊಡ್ಡವನಾಗಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಇಸ್ರಾಯೇಲ್ಯರ ಮೇಲೆ ಐಗುಪ್ತ್ಯರಲ್ಲಿ ದಯೆಯನ್ನು ಹುಟ್ಟಿಸಿದನು. ಇದಲ್ಲದೆ ಐಗುಪ್ತದೇಶದಲ್ಲಿ ಫರೋಹನ ಪ್ರಜಾಪರಿವಾರದವರು ಆ ಮೋಶೆಯನ್ನು ಮಹಾಪುರುಷನೆಂದು ತಿಳಿದುಕೊಂಡರು.
Kannada Bible (KNCL) BSI 2016
ಈಜಿಪ್ಟಿನವರಿಗೆ ಇಸ್ರಯೇಲರ ಮೇಲೆ ಕನಿಕರ ಉಂಟಾಗುವಂತೆ ಮಾಡಿದರು ಸರ್ವೇಶ್ವರ. ಇದಲ್ಲದೆ ಈಜಿಪ್ಟ್ ದೇಶದ ಫರೋಹನ ಪರಿವಾರದವರು ಮೋಶೆಯನ್ನು ಮಹಾಪುರುಷನೆಂದು ಭಾವಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಯೆಹೋವ ದೇವರು ಈಜಿಪ್ಟಿನವರ ದೃಷ್ಟಿಯಲ್ಲಿ ಜನರಿಗೆ ದಯೆ ದೊರಕುವಂತೆ ಮಾಡಿದರು. ಇದಲ್ಲದೆ ಮೋಶೆಯು ಈಜಿಪ್ಟ್ ದೇಶದಲ್ಲಿಯೂ ಫರೋಹನ ಅಧಿಕಾರಿಗಳ ದೃಷ್ಟಿಯಲ್ಲಿಯೂ ಜನರ ದೃಷ್ಟಿಯಲ್ಲಿಯೂ ಬಹಳ ಗೌರವ ಹೊಂದಿದನು.