Exodus 11:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈಜಿಪ್ಟಿನ ಚೊಚ್ಚಲು ಮಕ್ಕಳೆಲ್ಲರೂ ಅಂದರೆ ಫರೋಹನ ಚೊಚ್ಚಲು ಮಗನಿಂದಿಡಿದು ಧಾನ್ಯವನ್ನು ಬೀಸುವ ಸೇವಕಿಯ ಚೊಚ್ಚಲು ಮಗನವರೆಗೂ ಇರುವ ಚೊಚ್ಚಲು ಮಕ್ಕಳೆಲ್ಲರೂ ಸಾಯುವರು. ಇದಲ್ಲದೆ ಚೊಚ್ಚಲು ಪಶುಗಳೂ ಸಾಯುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಸಿಂಹಾಸನದ ಮೇಲೆ ಕುಳಿತಿರುವ ಫರೋಹನ ಚೊಚ್ಚಲು ಮಗನು ಮೊದಲುಗೊಂಡು, ಬೀಸುವಕಲ್ಲಿನ ಹಿಂದೆ ಕುಳಿತಿರುವ ದಾಸಿಯ ಚೊಚ್ಚಲು ಮಗನವರೆಗೂ ಐಗುಪ್ತ ದೇಶದಲ್ಲಿರುವ ಚೊಚ್ಚಲು ಮಕ್ಕಳೆಲ್ಲರೂ ಸಾಯುವರು. ಪಶುಗಳಲ್ಲಿಯೂ ಚೊಚ್ಚಲಾದವುಗಳೆಲ್ಲಾ ಸಾಯುವವು.
Kannada BSI Bible 2016
ಆಗ ಐಗುಪ್ತದೇಶದ ಚೊಚ್ಚಲ ಮಕ್ಕಳು ಅಂದರೆ ಸಿಂಹಾ ಸನದ ಮೇಲೆ ಕೂತಿರುವ ಫರೋಹನ ಚೊಚ್ಚಲ ಮಗನು ಮೊದಲುಗೊಂಡು ಬೀಸುವ ಕಲ್ಲಿನ ಹಿಂದೆ ಇರುವ ದಾಸಿಯ ಚೊಚ್ಚಲ ಮಗನ ವರೆಗೆ ಮತ್ತು ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವು ಸಾಯುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಸಿಂಹಾಸನದ ಮೇಲೆ ಕೂತಿರುವ ಫರೋಹನ ಚೊಚ್ಚಲುಮಗನು ಮೊದಲುಗೊಂಡು ಬೀಸುವ ಕಲ್ಲಿನ ಹಿಂದೆ ಕೂತಿರುವ ದಾಸಿಯ ಚೊಚ್ಚಲುಮಗನವರೆಗೂ ಐಗುಪ್ತದೇಶದಲ್ಲಿ ಚೊಚ್ಚಲುಮಕ್ಕಳೆಲ್ಲರೂ ಸಾಯುವರು; ಪಶುಗಳಲ್ಲೂ ಚೊಚ್ಚಲಾದವುಗಳೆಲ್ಲಾ ಸಾಯುವವು.
Kannada Bible (KNCL) BSI 2016
ಆಗ, ಸಿಂಹಾಸನಾರೂಢನಾದ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಬೀಸುಕಲ್ಲನ್ನು ಹಿಡಿದು ಕೂತಿರುವ ದಾಸಿಯ ಚೊಚ್ಚಲು ಮಗನವರೆಗೂ ಈಜಿಪ್ಟ್ ದೇಶದಲ್ಲಿ ಚೊಚ್ಚಲು ಮಕ್ಕಳೆಲ್ಲರು ಸಾಯುವರು. ಪಶುಪ್ರಾಣಿಗಳಲ್ಲೂ ಚೊಚ್ಚಲಾದವುಗಳೆಲ್ಲಾ ಸಾಯುವುವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಈಜಿಪ್ಟ್ ದೇಶದ ಚೊಚ್ಚಲ ಮಕ್ಕಳು ಅಂದರೆ, ಸಿಂಹಾಸನದ ಮೇಲೆ ಕೂತಿರುವ ಫರೋಹನ ಚೊಚ್ಚಲ ಮಗನು ಮೊದಲುಗೊಂಡು ಬೀಸುವ ಕಲ್ಲನ್ನು ಹಿಡಿದಿರುವ ದಾಸಿಯ ಚೊಚ್ಚಲ ಮಗನವರೆಗೆ ಮತ್ತು ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವೂ ಸಾಯುವುವು.