Exodus 11:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಯೆಹೋವನು ಮೋಶೆಗೆ, “ಫರೋಹನು ನಿನ್ನ ಮಾತಿಗೆ ಕಿವಿಗೊಡುವುದಿಲ್ಲ. ಯಾಕೆಂದರೆ ನಾನು ನನ್ನ ಮಹಾಶಕ್ತಿಯನ್ನು ಈಜಿಪ್ಟಿನಲ್ಲಿ ತೋರಿಸಬೇಕಾಗಿದೆ” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಮೋಶೆಗೆ, “ಐಗುಪ್ತ ದೇಶದಲ್ಲಿ ನನ್ನ ಮಹತ್ಕಾರ್ಯಗಳನ್ನು ಇನ್ನೂ ಹೆಚ್ಚಾಗಿ ನಡೆಯಬೇಕಾಗಿರುವುದರಿಂದ ಫರೋಹನು ನಿಮ್ಮ ಮಾತನ್ನು ಕೇಳುವುದಿಲ್ಲ” ಎಂದು ಹೇಳಿದನು.
Kannada BSI Bible 2016
ಆದರೆ ಕರ್ತನು ಮೋಶೆಗೆ--ನನ್ನ ಅದ್ಭುತಗಳು ಐಗುಪ್ತದೇಶದಲ್ಲಿ ಹೆಚ್ಚಾಗುವಂತೆ ಫರೋಹನು ನಿಮ್ಮ ಮಾತನ್ನು ಕೇಳುವದಿಲ್ಲ ಅಂದನು.ಈ ಅದ್ಭುತ ಗಳನ್ನೆಲ್ಲಾ ಮೋಶೆ ಆರೋನರು ಫರೋಹನ ಮುಂದೆ ಮಾಡಿದರು. ಆದರೆ ಕರ್ತನು ಫರೋಹನ ಹೃದಯ ವನ್ನು ಕಠಿಣಮಾಡಿದ್ದರಿಂದ ಅವನು ಇಸ್ರಾಯೇಲ್ ಮಕ್ಕಳನ್ನು ತನ್ನ ದೇಶದೊಳಗಿಂದ ಕಳುಹಿಸಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಮೋಶೆಗೆ - ಫರೋಹನು ನಿಮ್ಮ ಮಾತನ್ನು ಕೇಳುವದಿಲ್ಲವಾದದರಿಂದ ಐಗುಪ್ತದೇಶದಲ್ಲಿ ಮಹತ್ಕಾರ್ಯಗಳನ್ನು ಹೆಚ್ಚಾಗಿ ನಡಿಸುವದಕ್ಕೆ ನನಗೆ ಆಸ್ಪದವಾಗುವದೆಂಬದಾಗಿ ಹೇಳಿದ್ದನಷ್ಟೆ.
Kannada Bible (KNCL) BSI 2016
ಸರ್ವೇಶ್ವರ ಮೋಶೆಗೆ, “ಫರೋಹನು ನಿಮ್ಮ ಮಾತನ್ನು ಕೇಳುವುದಿಲ್ಲ; ಆದ್ದರಿಂದ ಈಜಿಪ್ಟ್ ದೇಶದಲ್ಲಿ ಸೂಚಕಕಾರ್ಯಗಳನ್ನು ಹೆಚ್ಚಾಗಿ ನಡೆಸಲು ಆಸ್ಪದ ದೊರಕುವುದು,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯೆಹೋವ ದೇವರು ಮೋಶೆಗೆ, “ನನ್ನ ಅದ್ಭುತಗಳು ಈಜಿಪ್ಟ್ ದೇಶದಲ್ಲಿ ಹೆಚ್ಚಾಗುವಂತೆ ಫರೋಹನು ನಿಮ್ಮ ಮಾತನ್ನು ಕೇಳುವುದಿಲ್ಲ,” ಎಂದರು.