Exodus 12:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ಭೋಜನ ಮಾಡುವಾಗ ಪ್ರಯಾಣ ಮಾಡುತ್ತಿರುವಂತೆ ಬಟ್ಟೆ ಧರಿಸಿಕೊಂಡಿರಬೇಕು; ಕೆರಗಳನ್ನು ಹಾಕಿಕೊಂಡು ನಿಮ್ಮ ಊರುಗೋಲನ್ನು ಕೈಯಲ್ಲಿ ಹಿಡಿದಿರಬೇಕು. ನೀವು ಅವಸವಸರವಾಗಿ ತಿನ್ನಬೇಕು. ಯಾಕೆಂದರೆ ಇದು ಯೆಹೋವನ ಪಸ್ಕಹಬ್ಬ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಭೋಜನವನ್ನು ಮಾಡಬೇಕಾದ ಕ್ರಮ ಹೇಗೆಂದರೆ: ನೀವು ನಡುವನ್ನು ಕಟ್ಟಿಕೊಂಡು, ಕೆರವನ್ನು ಮೆಟ್ಟಿಕೊಂಡು, ಕೋಲುಹಿಡಿದು, ತ್ವರೆಯಾಗಿ ಮಾಡಬೇಕು. ಇದು ಯೆಹೋವನಿಗೆ ಆಚರಿಸತಕ್ಕ ಪಸ್ಕಹಬ್ಬವು.
Kannada BSI Bible 2016
ನೀವು ಅದನ್ನು ತಿನ್ನತಕ್ಕ ರೀತಿ ಇದೇ: ನೀವು ನಿಮ್ಮ ನಡುಕಟ್ಟಿಕೊಂಡು, ಕೆರ ಮೆಟ್ಟಿಕೊಂಡು, ಕೋಲನ್ನು ಹಿಡಿದುಕೊಂಡು, ತ್ವರೆಯಾಗಿ ಅದನ್ನು ತಿನ್ನಬೇಕು. ಅದು ಕರ್ತನ ಪಸ್ಕವಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಭೋಜನವನ್ನು ಮಾಡಬೇಕಾದ ಕ್ರಮ ಹೇಗಂದರೆ - ನೀವು ನಡುವನ್ನು ಕಟ್ಟಿ ಕೆರವನ್ನು ಮೆಟ್ಟಿಕೊಂಡು ಕೋಲು ಹಿಡಿದು ತ್ವರೆಯಾಗಿ ಮಾಡಬೇಕು. ಇದು ಯೆಹೋವನಿಗೆ ಆಚರಿಸತಕ್ಕ ಪಸ್ಕಹಬ್ಬವು.
Kannada Bible (KNCL) BSI 2016
ಆ ಭೋಜನವನ್ನು ಮಾಡಬೇಕಾದ ಕ್ರಮ ಇದು: ನೀವು ನಡುಕಟ್ಟಿಕೊಂಡು, ಕೆರಮೆಟ್ಟಿಕೊಂಡು ಊರುಗೋಲನ್ನು ಹಿಡಿದುಕೊಂಡು ಬೇಗ ಬೇಗನೆ ಊಟಮಾಡಬೇಕು. ಏಕೆಂದರೆ ಅದು ಸರ್ವೇಶ್ವರ ಸ್ವಾಮಿಗೆ ಆಚರಿಸತಕ್ಕ ಪಾಸ್ಕಹಬ್ಬ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಅದನ್ನು ತಿನ್ನತಕ್ಕ ರೀತಿ ಇದೇ: ನೀವು ನಿಮ್ಮ ನಡುಕಟ್ಟಿಕೊಂಡು, ಕೆರಮೆಟ್ಟಿಕೊಂಡು ಊರುಗೋಲನ್ನು ಹಿಡಿದುಕೊಂಡು ತ್ವರೆಯಾಗಿ ಅದನ್ನು ತಿನ್ನಬೇಕು, ಅದು ಯೆಹೋವ ದೇವರ ಪಸ್ಕವಾಗಿದೆ.