Exodus 12:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಹಬ್ಬದಲ್ಲಿ ನೀವು ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿವಸ ತಿನ್ನುವಿರಿ. ಹಬ್ಬದ ಪ್ರಥಮ ದಿನದಲ್ಲಿ ನೀವು ನಿಮ್ಮ ಮನೆಯಿಂದ ಎಲ್ಲಾ ಹುಳಿಯನ್ನು ತೆಗೆದುಹಾಕುವಿರಿ. ಈ ಹಬ್ಬದ ಏಳು ದಿನಗಳಲ್ಲಿ ಯಾವುದೇ ಹುಳಿಯನ್ನು ತಿನ್ನಬಾರದು. ಯಾವನಾದರೂ ಹುಳಿಯನ್ನು ತಿಂದರೆ, ನೀವು ಅವನನ್ನು ಇಸ್ರೇಲಿನಿಂದ ಬಹಿಷ್ಕರಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಏಳು ದಿನಗಳವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಬಿಡಬೇಕು. ಏಕೆಂದರೆ ಮೊದಲನೆಯ ದಿನದಿಂದ ಏಳನೆಯ ದಿನದವರೆಗೆ ಹುಳಿರೊಟ್ಟಿಯನ್ನು ತಿನ್ನುವವನು ಇಸ್ರಾಯೇಲಿನೊಳಗಿಂದ ತೆಗೆದುಹಾಕಲ್ಪಡಬೇಕು.
Kannada BSI Bible 2016
ಏಳು ದಿನಗಳ ವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಹಾಕಬೇಕು; ಮೊದಲನೆಯ ದಿನದಿಂದ ಏಳ ನೆಯ ದಿನದ ವರೆಗೆ ಹುಳಿರೊಟ್ಟಿಯನ್ನು ತಿನ್ನುವವರು ಇಸ್ರಾಯೇಲಿನೊಳಗಿಂದ ತೆಗೆದು ಹಾಕಲ್ಪಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಏಳು ದಿವಸ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನೆಲ್ಲಾ ನಿಮ್ಮ ಮನೆಗಳೊಳಗಿಂದ ತೆಗೆದುಬಿಡಬೇಕು. ಆ ದಿವಸ ಮೊದಲುಗೊಂಡು ಏಳು ದಿವಸಗಳೊಳಗೆ ಯಾವನಾದರೂ ಹುಳಿಬೆರಸಿದ್ದನ್ನು ತಿಂದರೆ ಅವನು ಇಸ್ರಾಯೇಲ್ಯರಿಂದ ತೆಗೆದು ಹಾಕಲ್ಪಡಬೇಕು.
Kannada Bible (KNCL) BSI 2016
ಏಳು ದಿವಸ ನೀವು ಹುಳಿರಹಿತ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲೇ ಹುಳಿಹಿಟ್ಟನ್ನೆಲ್ಲಾ ನಿಮ್ಮ ಮನೆಗಳಿಂದ ತೆಗೆದುಬಿಡಬೇಕು. ಆ ಏಳು ದಿನಗಳಲ್ಲಿ ಯಾವನಾದರೂ ಹುಳಿಬೆರಸಿದ್ದನ್ನು ತಿಂದರೆ ಅವನನ್ನು ಇಸ್ರಯೇಲರಿಂದ ಬಹಿಷ್ಕರಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಳು ದಿನಗಳವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಹಾಕಬೇಕು. ಏಕೆಂದರೆ ಮೊದಲನೆಯ ದಿನದಿಂದ ಏಳನೆಯ ದಿನದವರೆಗೆ ಹುಳಿರೊಟ್ಟಿ ತಿನ್ನುವವರನ್ನು ಇಸ್ರಾಯೇಲಿನೊಳಗಿಂದ ಬಹಿಷ್ಕರಿಸಬೇಕು.