Exodus 12:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಪ್ರಥಮ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲ ನೀವು ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಲು ಆರಂಭಿಸಿ ಅದೇ ತಿಂಗಳ ಇಪ್ಪತ್ತೊಂದನೇ ದಿನದ ಸಾಯಂಕಾಲದವರೆಗೂ ತಿನ್ನುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲ ಮೊದಲುಗೊಂಡು ಅದೇ ತಿಂಗಳಿನ ಇಪ್ಪತ್ತೊಂದನೆಯ ದಿನದ ಸಾಯಂಕಾಲದವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನೇ ತಿನ್ನಬೇಕು.
Kannada BSI Bible 2016
ಮೊದಲನೆಯ ತಿಂಗಳಿನಲ್ಲಿ ಅದೇ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲದಿಂದ ಆ ತಿಂಗಳಿನ ಇಪ್ಪತ್ತೊಂದನೆಯ ದಿನದ ಸಾಯಂಕಾಲದ ವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿವಸದ ಸಾಯಂಕಾಲ ಮೊದಲುಗೊಂಡು ಅದೇ ತಿಂಗಳಿನ ಇಪ್ಪತ್ತೊಂದನೆಯ ದಿನದ ಸಾಯಂಕಾಲದವರೆಗೂ ನೀವು ಹುಳಿಯಿಲ್ಲದ ರೊಟ್ಟಿಗಳನ್ನೇ ತಿನ್ನಬೇಕು.
Kannada Bible (KNCL) BSI 2016
ಮೊದಲನೇ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯಿಂದ ಇಪ್ಪತ್ತೊಂದನೆಯ ದಿನದ ಸಂಜೆಯವರೆಗೂ ನೀವು ಹುಳಿಯಿಲ್ಲದ ರೊಟ್ಟಿಗಳನ್ನೇ ತಿನ್ನಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯಿಂದ ಅದೇ ತಿಂಗಳಿನ ಇಪ್ಪತ್ತೊಂದನೆಯ ದಿನ ಸಂಜೆಯವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು.