Exodus 12:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಮೋಶೆಯು ಹಿರಿಯರ ಸಭೆ ಸೇರಿಸಿ, “ನಿಮ್ಮ ಕುಟುಂಬಗಳಿಗೆ ಬೇಕಾದ ಪಶುಗಳನ್ನು ತೆಗೆದುಕೊಂಡು ಪಸ್ಕಕ್ಕಾಗಿ ಅವುಗಳನ್ನು ಕೊಯ್ಯಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಮೋಶೆಯು ಇಸ್ರಾಯೇಲರ ಹಿರಿಯರೆಲ್ಲರನ್ನೂ ಕರೆಯಿಸಿ ಅವರಿಗೆ, “ನೀವು, ನಿಮ್ಮ ನಿಮ್ಮ ಕುಟುಂಬಗಳಿಗೋಸ್ಕರ ಮಂದೆಯಿಂದ ಮರಿಗಳನ್ನು ಆರಿಸಿಕೊಂಡು ಪಸ್ಕಹಬ್ಬಕ್ಕೆ ಕೊಯ್ಯಿರಿ.
Kannada BSI Bible 2016
ಆಗ ಮೋಶೆಯು ಇಸ್ರಾಯೇಲಿನ ಎಲ್ಲಾ ಹಿರಿಯ ರನ್ನು ಕರೆದು ಅವರಿಗೆ--ನಿಮ್ಮ ಗೋತ್ರಗಳ ಪ್ರಕಾರ ಕುರಿಗಳನ್ನು ತೆಗೆದುಕೊಂಡು ಪಸ್ಕವನ್ನು (ಕುರಿಯನ್ನು) ಕೊಯ್ಯಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಮೋಶೆಯು ಇಸ್ರಾಯೇಲ್ಯರ ಹಿರಿಯರೆಲ್ಲರನ್ನೂ ಕೂಡ ಕರಸಿ ಅವರಿಗೆ - ನೀವು ನಿಮ್ಮ ನಿಮ್ಮ ಕುಟುಂಬಗಳಿಗೋಸ್ಕರ ಹಿಂಡಿನಿಂದ ಮರಿಗಳನ್ನು ತೆಗೆದುಕೊಂಡು ಪಸ್ಕ ಹಬ್ಬಕ್ಕೆ ಕೊಯ್ಯಿರಿ.
Kannada Bible (KNCL) BSI 2016
ಮೋಶೆ ಇಸ್ರಯೇಲರ ಹಿರಿಯರೆಲ್ಲರನ್ನು ಕರೆಯಿಸಿ ಅವರಿಗೆ, “ನೀವು ನಿಮ್ಮ ನಿಮ್ಮ ಕುಟುಂಬಗಳಿಗಾಗಿ ಹಿಂಡಿನಿಂದ ಮರಿಗಳನ್ನು ಆರಿಸಿಕೊಂಡು ಪಾಸ್ಕ ಹಬ್ಬಕ್ಕೆ ಕೊಯ್ಯಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಮೋಶೆಯು ಇಸ್ರಾಯೇಲಿನ ಎಲ್ಲಾ ಹಿರಿಯರನ್ನು ಕರೆದು ಅವರಿಗೆ, “ನಿಮ್ಮ ಕುಟುಂಬಗಳ ಪ್ರಕಾರ ಕುರಿಗಳನ್ನು ಆಯ್ದುಕೊಂಡು ಪಸ್ಕಹಬ್ಬಕ್ಕಾಗಿ ಕೊಯ್ಯಿರಿ.