Exodus 12:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ನಿಮಗೆ ಕೊಡಲಿರುವ ದೇಶಕ್ಕೆ ನೀವು ಹೋದಾಗಲೂ ಈ ಹಬ್ಬವನ್ನು ಆಚರಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ತನ್ನ ಮಾತಿನ ಮೇರೆಗೆ ನಿಮಗೆ ಕೊಡುವ ದೇಶಕ್ಕೆ ನೀವು ಬಂದಾಗ, ಈ ಆಚರಣೆಯನ್ನು ಕೈಕೊಳ್ಳಬೇಕು.
Kannada BSI Bible 2016
ಕರ್ತನು ಕೊಡುವೆನೆಂದು ಪ್ರಮಾಣಮಾಡಿದ ದೇಶಕ್ಕೆ ನೀವು ಬಂದಾಗ ಈ ಆಚರಣೆಯನ್ನು ನೀವು ಕೈಕೊಳ್ಳಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ತನ್ನ ಮಾತಿನ ಮೇರೆಗೆ ನಿಮಗೆ ಕೊಡುವ ದೇಶಕ್ಕೆ ನೀವು ಬಂದಾಗ ಈ ಆಚಾರವನ್ನು ನಡಿಸಬೇಕು.
Kannada Bible (KNCL) BSI 2016
ಸರ್ವೇಶ್ವರ ತಮ್ಮ ವಾಗ್ದಾನದ ಮೇರೆಗೆ ನಿಮಗೆ ಕೊಡುವ ನಾಡಿಗೆ ನೀವು ಸೇರಿದಾಗ ಈ ವಿಧಿಯನ್ನು ಅನುಸರಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಕೊಡುವೆನೆಂದು ಪ್ರಮಾಣ ಮಾಡಿದ ದೇಶಕ್ಕೆ ನೀವು ಬಂದಾಗ, ಈ ಆಚರಣೆಯನ್ನು ನೀವು ಕೈಗೊಳ್ಳಬೇಕು.