Exodus 12:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮಧ್ಯರಾತ್ರಿಯಲ್ಲಿ ಯೆಹೋವನು ಈಜಿಪ್ಟಿನಲ್ಲಿದ್ದ ಚೊಚ್ಚಲು ಗಂಡುಮಕ್ಕಳನ್ನೆಲ್ಲಾ ಸಂಹರಿಸಿದನು. ಫರೋಹನ ಚೊಚ್ಚಲು ಮಗನಿಂದಿಡಿದು ಸೆರೆಮನೆಯಲ್ಲಿದ್ದ ಕೈದಿಯ ಚೊಚ್ಚಲು ಮಗನವರೆಗೆ ಇರುವ ಎಲ್ಲಾ ಚೊಚ್ಚಲು ಮಕ್ಕಳನ್ನು ಆತನು ಸಂಹರಿಸಿದನು. ಚೊಚ್ಚಲು ಪಶುಗಳೂ ಸಂಹರಿಸಲ್ಪಟ್ಟವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಧ್ಯರಾತ್ರಿಯಲ್ಲಿ ಯೆಹೋವನು ಸಿಂಹಾಸನದಲ್ಲಿರುವ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನವರೆಗೂ, ಐಗುಪ್ತ ದೇಶದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಸಂಹಾರ ಮಾಡಿದನು. ಪಶುಗಳ ಚೊಚ್ಚಲು ಮರಿಗಳನ್ನೂ ಸಂಹಾರಮಾಡಿದನು.
Kannada BSI Bible 2016
ಮಧ್ಯರಾತ್ರಿಯಲ್ಲಿ ನಡೆದದ್ದೇನಂದರೆ, ಸಿಂಹಾ ಸನದ ಮೇಲೆ ಕೂತುಕೊಂಡ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನ ವರೆಗೂ ಅಂದರೆ ಐಗುಪ್ತದೇಶ ದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವನ್ನೂ ಕರ್ತನು ಸಂಹರಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರ್ಧರಾತ್ರಿಯಲ್ಲಿ ಯೆಹೋವನು ಸಿಂಹಾಸನದಲ್ಲಿರುವ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಬಂದಿವಾನನ ಚೊಚ್ಚಲು ಮಗನವರೆಗೂ ಐಗುಪ್ತದೇಶದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಪಶುಗಳ ಚೊಚ್ಚಲು ಮರಿಗಳನ್ನೂ ಸಂಹಾರ ಮಾಡಿದನು.
Kannada Bible (KNCL) BSI 2016
ಅರ್ಧರಾತ್ರಿಯಲ್ಲಿ ಸರ್ವೇಶ್ವರ ಸ್ವಾಮಿ ಸಿಂಹಾಸನಾರೂಢನಾಗಬೇಕಾಗಿದ್ದ ಫರೋಹನ ಚೊಚ್ಚಲು ಮಗನು ಮೊದಲ್ಗೊಂಡು ಸೆರೆಯಲ್ಲಿದ್ದ ಖೈದಿಯ ಚೊಚ್ಚಲ ಮಗನವರೆಗೂ ಈಜಿಪ್ಟ್ ದೇಶದಲ್ಲಿದ್ದ ಎಲ್ಲ ಚೊಚ್ಚಲು ಮಕ್ಕಳನ್ನೂ ಪ್ರಾಣಿಗಳ ಚೊಚ್ಚಲ ಮರಿಗಳನ್ನೂ ಸಂಹಾರ ಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಧ್ಯರಾತ್ರಿಯಲ್ಲಿ ಸಿಂಹಾಸನದ ಮೇಲೆ ಕೂತುಕೊಂಡ ಫರೋಹನ ಚೊಚ್ಚಲು ಮಗನು ಮೊದಲುಗೊಂಡು, ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನವರೆಗೂ, ಎಂದರೆ ಈಜಿಪ್ಟ್ ದೇಶದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ, ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವನ್ನೂ ಯೆಹೋವ ದೇವರು ಸಂಹರಿಸಿದರು.