Exodus 12:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಆಜ್ಞೆಯು ಇಡೀ ಇಸ್ರೇಲರ ಸಮೂಹಕ್ಕೆ ಅನ್ವಯಿಸುತ್ತದೆ. ಈ ತಿಂಗಳ ಹತ್ತನೆಯ ದಿನದಲ್ಲಿ ಪ್ರತಿಯೊಬ್ಬನು ತನ್ನ ಮನೆಯಲ್ಲಿರುವ ಜನರಿಗಾಗಿ ಒಂದು ಕುರಿಮರಿಯನ್ನು ಅಥವಾ ಒಂದು ಆಡುಮರಿಯನ್ನು ಕೊಯ್ಯಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದರ ವಿಷಯದಲ್ಲಿ ನೀವು ಇಸ್ರಾಯೇಲರ ಸಮೂಹಕ್ಕೆಲ್ಲಾ ಹೀಗೆ ಅಪ್ಪಣೆಮಾಡಬೇಕು, ‘ಈ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮ ನಿಮ್ಮ ಗೋತ್ರಗಳ ಪ್ರತಿಯೊಂದು ಮನೆಯವರು ಒಂದೊಂದು ಕುರಿಮರಿಯನ್ನಾಗಲಿ, ಆಡುಮರಿಯನ್ನಾಗಲಿ ತೆಗೆದುಕೊಳ್ಳಬೇಕು.
Kannada BSI Bible 2016
ಇಸ್ರಾಯೇಲ್ ಸಭೆಗೆಲ್ಲಾ ನೀವು ಹೇಳಬೇಕಾದದ್ದೇ ನಂದರೆ--ಈ ತಿಂಗಳಿನ ಹತ್ತನೆಯ ದಿನದಲ್ಲಿ ಅವರು ತಮಗೆ ಒಂದೊಂದು ಕುರಿಮರಿಯನ್ನು ಅವರ ತಂದೆಗಳ ಮನೆಯ ಪ್ರಕಾರ ಮನೆಗೆ ಒಂದು ಕುರಿಮರಿಯನ್ನು ತಕ್ಕೊಳ್ಳಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದರ ವಿಷಯದಲ್ಲಿ ನೀವು ಇಸ್ರಾಯೇಲ್ಯರ ಸಮೂಹಕ್ಕೆಲ್ಲಾ ಅಪ್ಪಣೆ ಮಾಡಬೇಕಾದದ್ದೇನಂದರೆ - ಈ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮ ನಿಮ್ಮ ಗೋತ್ರಗಳ ಪ್ರತಿಯೊಂದು ಮನೆಯವರು ಒಂದೊಂದು ಕುರಿಮರಿಯನ್ನಾಗಲಿ ಆಡುಮರಿಯನ್ನಾಗಲಿ ತೆಗೆದುಕೊಳ್ಳಬೇಕು.
Kannada Bible (KNCL) BSI 2016
ಈ ವಿಷಯದಲ್ಲಿ ನೀವು ಇಸ್ರಯೇಲರ ಸಮಾಜಕ್ಕೆಲ್ಲ ಈ ರೀತಿ ಕಟ್ಟಳೆಯಿಡಬೇಕು: ‘ಈ ತಿಂಗಳ ಹತ್ತನೆಯ ದಿನದಲ್ಲಿ ನಿಮ್ಮ ನಿಮ್ಮ ಗೋತ್ರಗಳ ಪ್ರತಿಯೊಂದು ಮನೆಯವರು ಒಂದೊಂದು ಕುರಿಮರಿಯನ್ನಾಗಲಿ, ಆಡುಮರಿಯನ್ನಾಗಲಿ ಆರಿಸಿಕೊಳ್ಳಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲ್ ಸಭೆಗೆಲ್ಲಾ ನೀವು ಹೇಳಬೇಕಾದದ್ದೇನೆಂದರೆ, ಈ ತಿಂಗಳಿನ ಹತ್ತನೆಯ ದಿನದಲ್ಲಿ ಅವರು ತಮಗೆ ಪ್ರತಿ ಗೋತ್ರಗಳ ಪ್ರತಿಯೊಂದು ಕುಟುಂಬಕ್ಕೆ ಒಂದರಂತೆ ಕುರಿಮರಿಯನ್ನು ತೆಗೆದುಕೊಳ್ಳಬೇಕು.