Exodus 12:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ರಾತ್ರಿಯಲ್ಲಿ ಫರೋಹನೂ ಅವನ ಅಧಿಕಾರಿಗಳೂ ಈಜಿಪ್ಟಿನ ಜನರೆಲ್ಲರೂ ಎದ್ದರು. ಈಜಿಪ್ಟಿನಲ್ಲಿ ಮಹಾ ಗೋಳಾಟ ಉಂಟಾಯಿತು. ಯಾಕೆಂದರೆ ಸಾವಿಲ್ಲದ ಮನೆಯೇ ಇರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ರಾತ್ರಿಯಲ್ಲಿ ಫರೋಹನೂ, ಅವನ ಪರಿವಾರದವರೂ, ಐಗುಪ್ತ್ಯರೆಲ್ಲರೂ ಎದ್ದು ನೋಡಲಾಗಿ ಸಾವಿಲ್ಲದ ಮನೆ ಒಂದೂ ಇರಲಿಲ್ಲ. ಐಗುಪ್ತ ದೇಶದಲ್ಲಿ ದೊಡ್ಡ ಗೋಳಾಟವಾಯಿತು.
Kannada BSI Bible 2016
ಆಗ ಫರೋಹನೂ ಅವನ ಎಲ್ಲಾ ಸೇವಕರೂ ಎಲ್ಲಾ ಐಗುಪ್ತ್ಯರೂ ರಾತ್ರಿಯಲ್ಲಿ ಎದ್ದರು. ಆಗ ಐಗುಪ್ತದಲ್ಲಿ ದೊಡ್ಡ ಗೋಳಾಟವಾಯಿತು. ಅಲ್ಲಿ ಸತ್ತವರಿಲ್ಲದ ಒಂದು ಮನೆಯಾದರೂ ಇರಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ರಾತ್ರಿಯಲ್ಲಿ ಫರೋಹನೂ ಅವನ ಪರಿವಾರದವರೂ ಐಗುಪ್ತ್ಯರೆಲ್ಲರೂ ಎದ್ದು ನೋಡಲಾಗಿ ಶವವಿಲ್ಲದ ಮನೆ ಒಂದೂ ಇರಲಿಲ್ಲವಾದದರಿಂದ ಐಗುಪ್ತದೇಶದಲ್ಲಿ ದೊಡ್ಡ ಗೋಳಾಟವುಂಟಾಯಿತು.
Kannada Bible (KNCL) BSI 2016
ಆ ರಾತ್ರಿ ಫರೋಹನೂ ಅವನ ಪರಿವಾರದವರೂ ಈಜಿಪ್ಟಿನವರೆಲ್ಲರೂ ಎದ್ದು ನೋಡಿದಾಗ ಶವವಿಲ್ಲದ ಮನೆ ಒಂದೂ ಇರಲಿಲ್ಲ. ಆದ್ದರಿಂದ ಆ ದೇಶದಲ್ಲೆಲ್ಲಾ ದೊಡ್ಡ ಗೋಳಾಟ ಎದ್ದಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಫರೋಹನೂ, ಅವನ ಎಲ್ಲಾ ಅಧಿಕಾರಿಗಳೂ, ಎಲ್ಲಾ ಈಜಿಪ್ಟಿನವರೂ ರಾತ್ರಿಯಲ್ಲಿ ಎದ್ದರು. ಆ ಈಜಿಪ್ಟಿನಲ್ಲಿ ದೊಡ್ಡ ಗೋಳಾಟವಾಯಿತು. ಏಕೆಂದರೆ ಅಲ್ಲಿ ಸತ್ತವರು ಇಲ್ಲದ ಒಂದು ಮನೆಯಾದರೂ ಇರಲಿಲ್ಲ.