Exodus 12:32 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ಕೇಳಿಕೊಂಡಂತೆ ನಿಮ್ಮ ಕುರಿಗಳನ್ನೂ ದನಕರುಗಳನ್ನೂ ನಿಮ್ಮೊಂದಿಗೆ ತೆಗೆದುಕೊಂಡು ಹೋಗಿರಿ! ನನ್ನನ್ನು ಆಶೀರ್ವಾದಿಸಿರಿ!” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಕೇಳಿಕೊಂಡಂತೆ ನಿಮ್ಮ ಕುರಿದನಗಳ ಹಿಂಡುಗಳನ್ನು ತೆಗೆದುಕೊಂಡು ಹೋಗಿರಿ. ಅದಲ್ಲದೆ ನನ್ನನ್ನೂ ಸಹ ಆಶೀರ್ವದಿಸಿರಿ” ಎಂದನು.
Kannada BSI Bible 2016
ನೀವು ಹೇಳಿದಂತೆ ನಿಮ್ಮ ಕುರಿದನಗಳನ್ನು ತೆಗೆದುಕೊಳ್ಳಿರಿ. ನನ್ನನ್ನು ಸಹ ಆಶೀರ್ವದಿಸಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಕೇಳಿಕೊಂಡಂತೆ ನಿಮ್ಮ ಕುರಿದನಗಳನ್ನೂ ತೆಗೆದುಕೊಂಡು ಹೋಗಬಹುದು; ಅದಲ್ಲದೆ ನನ್ನ ಹಿತಕ್ಕಾಗಿಯೂ ಪ್ರಾರ್ಥಿಸಿರಿ ಅಂದನು.
Kannada Bible (KNCL) BSI 2016
ನೀವು ಕೇಳಿಕೊಂಡಂತೆ ಸರ್ವೇಶ್ವರನನ್ನು ಆರಾಧಿಸಿ. ನಿಮ್ಮ ಕೋರಿಕೆಯಂತೆ ಕುರಿದನಗಳನ್ನೂ ತೆಗೆದುಕೊಂಡು ಹೋಗಬಹುದು. ನನ್ನ ಹಿತಕ್ಕಾಗಿಯೂ ಪ್ರಾರ್ಥನೆಮಾಡಿ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಹೇಳಿದಂತೆ ನಿಮ್ಮ ಕುರಿದನಗಳನ್ನು ತೆಗೆದುಕೊಳ್ಳಿರಿ. ನನ್ನನ್ನು ಸಹ ಆಶೀರ್ವದಿಸಿರಿ,” ಎಂದನು.