Exodus 12:36 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈಜಿಪ್ಟಿನವರು ಇಸ್ರೇಲರಿಗೆ ದಯೆ ತೋರಿಸುವಂತೆ ಯೆಹೋವನು ಪ್ರೇರೇಪಿಸಿದ್ದರಿಂದ ಈಜಿಪ್ಟಿನವರು ತಮ್ಮ ಸ್ವತ್ತುಗಳನ್ನು ಇಸ್ರೇಲರಿಗೆ ಕೊಟ್ಟುಬಿಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಅವರ ಮೇಲೆ ಐಗುಪ್ತ್ಯರಲ್ಲಿ ದಯೆಯನ್ನು ಹುಟ್ಟಿಸಿದ್ದರಿಂದ ಅವರು ಕೇಳಿಕೊಂಡದ್ದೆಲ್ಲವನ್ನು ಐಗುಪ್ತರು ಕೊಟ್ಟರು. ಹೀಗೆ ಇಸ್ರಾಯೇಲರು ಐಗುಪ್ತ್ಯರ ಸೊತ್ತನ್ನು ಸುಲಿದುಕೊಂಡರು.
Kannada BSI Bible 2016
ಕರ್ತನು ಐಗುಪ್ತ್ಯರ ಎದುರಿನಲ್ಲಿ ಜನರ ಮೇಲೆ ಕೃಪೆ ತೋರಿಸಿದ್ದರಿಂದ ಅವರು ಕೇಳಿದ್ದನ್ನು ಕೊಟ್ಟರು. ಹೀಗೆ ಅವರು ಐಗುಪ್ತ್ಯರನ್ನು ಸುಲು ಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಅವರ ಮೇಲೆ ಐಗುಪ್ತ್ಯರಲ್ಲಿ ದಯೆಯನ್ನು ಹುಟ್ಟಿಸಿದ್ದರಿಂದ ಅವರು ಕೇಳಿಕೊಂಡದ್ದನ್ನು ಕೊಟ್ಟರು. ಹೀಗೆ ಇಸ್ರಾಯೇಲ್ಯರು ಐಗುಪ್ತ್ಯರ ಸೊತ್ತನ್ನು ಸುಲುಕೊಂಡರು.
Kannada Bible (KNCL) BSI 2016
ಇಸ್ರಯೇಲರ ಮೇಲೆ ಈಜಿಪ್ಟಿನವರಿಗೆ ದಯೆ ಹುಟ್ಟುವಂತೆ ಮಾಡಿದ್ದರು ಸರ್ವೇಶ್ವರ. ಆದ್ದರಿಂದ ಅವರು ಕೇಳಿಕೊಂಡದ್ದನ್ನು ಈಜಿಪ್ಟಿನವರು ಕೊಟ್ಟುಬಿಟ್ಟರು. ಹೀಗೆ ಇಸ್ರಯೇಲರು ಈಜಿಪ್ಟಿನವರ ಸೊತ್ತನ್ನು ಸುಲಿಗೆ ಮಾಡಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಈಜಿಪ್ಟಿನವರ ಎದುರಿನಲ್ಲಿ ಜನರ ಮೇಲೆ ದಯೆ ತೋರಿಸಿದ್ದರಿಂದ, ಅವರು ಕೇಳಿದ್ದನ್ನು ಕೊಟ್ಟರು. ಹೀಗೆ ಅವರು ಈಜಿಪ್ಟಿನವರ ಸೊತ್ತನ್ನು ಸುಲಿದುಕೊಂಡರು.