Exodus 12:37 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲರು ರಮ್ಸೇಸ್‌ನಿಂದ ಸುಕ್ಕೋತಿಗೆ ಪ್ರಯಾಣ ಮಾಡಿದರು. ಅವರಲ್ಲಿ ಸುಮಾರು ಆರು ಲಕ್ಷಮಂದಿ ಗಂಡಸರಿದ್ದರು. (ಈ ಸಂಖ್ಯೆಯಲ್ಲಿ ಮಕ್ಕಳು ಮತ್ತು ಹೆಂಗಸರು ಸೇರಿಲ್ಲ.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರು ರಾಮ್ಸೇಸ್ ಪಟ್ಟಣದಿಂದ ಹೊರಟು ಸುಕ್ಕೋತಿಗೆ ಬಂದರು. ಹೆಂಗಸರು ಮಕ್ಕಳು ಅಲ್ಲದೆ ಗಂಡಸರು ಮಾತ್ರ ಸುಮಾರು ಆರುಲಕ್ಷ ಮಂದಿ ಇದ್ದರು.
Kannada BSI Bible 2016
ಆಗ ಇಸ್ರಾಯೇಲ್ಯರಲ್ಲಿ ಮಕ್ಕಳಲ್ಲದೆ ಗಂಡಸರು ಮಾತ್ರ ಆರು ಲಕ್ಷ ಕಾಲು ನಡಿಗೆಯಾಗಿ ರಮ್ಸೇಸನ್ನು ಬಿಟ್ಟು ಸುಕ್ಕೋತಿಗೆ ಪ್ರಯಾಣ ಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರು ರಮ್ಸೇಸ್ ಪಟ್ಟಣದಿಂದ ಹೊರಟು ಸುಕ್ಕೋತಿಗೆ ಬಂದರು. ಹೆಂಗಸರೂ ಮಕ್ಕಳೂ ಅಲ್ಲದೆ ಅವರ ಕಾಲ್ಬಲವೇ ಸುಮಾರು ಆರು ಲಕ್ಷ ಗಂಡಸರು.
Kannada Bible (KNCL) BSI 2016
ಇಸ್ರಯೇಲರು ರಮ್ಸೇಸ್ ಪಟ್ಟಣದಿಂದ ಹೊರಟು ಸುಕ್ಕೋತಿಗೆ ಬಂದರು. ಅವರಲ್ಲಿ ಮಹಿಳೆಯರನ್ನೂ ಮಕ್ಕಳನ್ನೂ ಬಿಟ್ಟು ಗಂಡಸರ ಸಂಖ್ಯೆಯೇ ಸುಮಾರು ಆರು ಲಕ್ಷವಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಇಸ್ರಾಯೇಲರಲ್ಲಿ ಮಕ್ಕಳಲ್ಲದೆ ಗಂಡಸರು ಮಾತ್ರ ಆರು ಲಕ್ಷ ಜನರು ಕಾಲುನಡಿಗೆಯಾಗಿ ರಮ್ಸೇಸನ್ನು ಬಿಟ್ಟು ಸುಕ್ಕೋತಿಗೆ ಪ್ರಯಾಣಮಾಡಿದರು.