Exodus 12:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದನ್ನು ಸಂಪೂರ್ಣವಾಗಿ ತಿನ್ನಲು ಅವನ ಮನೆಯಲ್ಲಿ ಸಾಕಷ್ಟು ಜನರಿಲ್ಲದಿದ್ದರೆ ಅವನು ತನ್ನ ನೆರೆಯವರನ್ನು ಆಮಂತ್ರಿಸಿ ಅವರೊಂದಿಗೆ ಅದರ ಮಾಂಸವನ್ನು ಹಂಚಿಕೊಳ್ಳಬೇಕು. ಪ್ರತಿಯೊಬ್ಬನಿಗೂ ತಿನ್ನಲು ಸಾಕಷ್ಟು ಮಾಂಸವಿರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕುಟುಂಬವು ಚಿಕ್ಕದಾಗಿದ್ದರೆ, ಒಂದು ಕುರಿಮರಿಯನ್ನು ಪೂರ್ಣವಾಗಿ ತಿನ್ನುವುದಕ್ಕೆ ಆಗದೆ ಹೋದ ಪಕ್ಷಕ್ಕೆ ನೆರೆಮನೆಯ ಕುಟುಂಬದವರೊಂದಿಗೆ ಸೇರಿ, ಒಬ್ಬೊಬ್ಬನು ಎಷ್ಟೆಷ್ಟು ತಿನ್ನುವನೆಂದು ಗೊತ್ತುಮಾಡಿಕೊಂಡು ಜನಗಳ ಸಂಖ್ಯಾನುಸಾರ ಮರಿಗಳನ್ನು ತೆಗೆದುಕೊಳ್ಳಲಿ.
Kannada BSI Bible 2016
ಒಂದು ಕುರಿಮರಿಯನ್ನು ತಿನ್ನುವದಕ್ಕೆ ಕುಟುಂಬವು ಚಿಕ್ಕದಾಗಿದ್ದರೆ ಅವನೂ ತನ್ನ ಮನೆಗೆ ಸವಿಾಪವಾಗಿರುವ ತನ್ನ ನೆರೆಯವನೂ ವ್ಯಕ್ತಿಗಳ ಲೆಕ್ಕದ ಪ್ರಕಾರ ಒಂದನ್ನು ತಕ್ಕೊಳ್ಳಲಿ; ಒಬ್ಬೊಬ್ಬನು ತಾನು ತಿನ್ನುವ ಅಳತೆಯ ಪ್ರಕಾರ ಕುರಿಮರಿಯನ್ನು ತಕ್ಕೊಳ್ಳಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕುಟುಂಬವು ಚಿಕ್ಕದಾಗಿದ್ದು ಪೂರಾ ಒಂದು ಮರಿಯನ್ನು ತಿನ್ನುವದಕ್ಕೆ ಆಗದೆ ಹೋದ ಪಕ್ಷಕ್ಕೆ ನೆರೆಮನೆಯ ಕುಟುಂಬದೊಂದಿಗೆ ಸೇರಿ ಒಬ್ಬೊಬ್ಬನು ಇಷ್ಟಿಷ್ಟು ತಿನ್ನುವನೆಂದು ಗೊತ್ತುಮಾಡಿಕೊಂಡು ಜನಗಳ ಸಂಖ್ಯಾನುಸಾರ ಮರಿಗಳನ್ನು ತೆಗೆದುಕೊಳ್ಳಲಿ.
Kannada Bible (KNCL) BSI 2016
ಕುಟುಂಬವು ಚಿಕ್ಕದಾಗಿದ್ದು ಒಂದು ಮರಿಯನ್ನು ಪೂರ್ತಿಯಾಗಿ ತಿನ್ನಲಾಗದಿದ್ದರೆ ಹತ್ತಿರದ ನೆರೆಮನೆಯ ಕುಟುಂಬದೊಂದಿಗೆ ಸೇರಿ ಒಬ್ಬೊಬ್ಬನು ಇಷ್ಟಿಷ್ಟು ತಿನ್ನುವನೆಂದು ಲೆಕ್ಕ ಹಾಕಿ ಜನಗಳ ಸಂಖ್ಯಾನುಸಾರ ಮರಿಗಳನ್ನು ಆರಿಸಿಕೊಳ್ಳಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಕುರಿಮರಿಯನ್ನು ಪೂರ್ತಿಯಾಗಿ ತಿನ್ನುವುದಕ್ಕೆ ಕುಟುಂಬವು ಚಿಕ್ಕದಾಗಿದ್ದರೆ, ತನ್ನ ಮನೆಗೆ ಸಮೀಪವಾಗಿರುವ ತನ್ನ ನೆರೆಯವನ ಕುಟುಂಬದಲ್ಲಿ ಲೆಕ್ಕನೋಡಿ ಅವರೊಂದಿಗೆ ಪಾಲು ಹೊಂದಲಿ. ಒಬ್ಬೊಬ್ಬನು ತಿನ್ನುವ ಅಳತೆಯ ಪ್ರಕಾರ ಕುರಿಮರಿಯನ್ನು ತೆಗೆದುಕೊಳ್ಳಲಿ.