Exodus 12:42 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಯೆಹೋವನು ಅವರನ್ನು ಸಂರಕ್ಷಿಸಿ ಈಜಿಪ್ಟಿನಿಂದ ಹೊರತಂದದ್ದನ್ನು ಜ್ಞಾಪಕಮಾಡುವ ಆ ರಾತ್ರಿ ಬಹು ವಿಶೇಷವಾದ ರಾತ್ರಿಯಾಗಿದೆ. ಇಸ್ರೇಲರೆಲ್ಲರೂ ಆ ರಾತ್ರಿಯನ್ನು ಯಾವಾಗಲೂ ಜ್ಞಾಪಿಸಿಕೊಳ್ಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಆ ರಾತ್ರಿಯಲ್ಲಿಯೇ ಅವರನ್ನು ಐಗುಪ್ತ ದೇಶದಿಂದ ಹೊರಗೆ ಬರಮಾಡಿದ್ದರಿಂದ ಅವರು ಈ ರಾತ್ರಿಯಲ್ಲಿ ಆತನ ಘನಕ್ಕಾಗಿ ಜಾಗರಣೆಯನ್ನು ಮಾಡಿದರು. ಇಸ್ರಾಯೇಲರೆಲ್ಲರೂ ತಲತಲಾಂತರಕ್ಕೂ ಯೆಹೋವನಿಗೆ ಜಾಗರಣೆಯನ್ನು ಆಚರಿಸಬೇಕಾದ ರಾತ್ರಿಯು ಇದೇ ಆಗಿದೆ.
Kannada BSI Bible 2016
ಆತನು ಐಗುಪ್ತದೇಶದಿಂದ ಅವರನ್ನು ಹೊರಗೆ ತಂದ ಕಾರಣ ಇದು ಕರ್ತನಿಗೆ ಆಚರಿಸ ಬೇಕಾದ ರಾತ್ರಿಯಾಗಿತ್ತು. ಇಸ್ರಾಯೇಲ್‌ ಮಕ್ಕಳೆ ಲ್ಲರೂ ತಮ್ಮ ಸಂತತಿಗಳಲ್ಲಿ ಕರ್ತನಿಗೆ ಆಚರಿಸ ಬೇಕಾದ ರಾತ್ರಿಯು ಇದೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಆ ರಾತ್ರಿಯಲ್ಲಿಯೇ ಅವರನ್ನು ಐಗುಪ್ತದೇಶದಿಂದ ಹೊರಗೆ ಬರಮಾಡಿದ್ದರಿಂದ ಅವರು ಈ ರಾತ್ರಿಯಲ್ಲಿ ಆತನ ಘನಕ್ಕಾಗಿ ಜಾಗರಣೆಯನ್ನು ಮಾಡಬೇಕು. ಇಸ್ರಾಯೇಲ್ಯರೆಲ್ಲರೂ ತಲತಲಾಂತರಕ್ಕೂ ಯೆಹೋವನಿಗೆ ಈ ಜಾಗರಣೆಯನ್ನು ಮಾಡಬೇಕು.
Kannada Bible (KNCL) BSI 2016
ಸರ್ವೇಶ್ವರ ಅವರನ್ನು ಈಜಿಪ್ಟ್ ದೇಶದಿಂದ ಹೊರಗೆ ಬರಮಾಡಲು ಜಾಗರೂಕರಾಗಿದ್ದದ್ದು ಆ ರಾತ್ರಿಯೇ. ಆದುದರಿಂದಲೆ ಇಸ್ರಯೇಲರೆಲ್ಲರು ತಲತಲಾಂತರಕ್ಕೂ ಸರ್ವೇಶ್ವರನ ಗೌರವಾರ್ಥ ಈ ರಾತ್ರಿಯಲ್ಲೇ ಜಾಗರಣೆಯನ್ನು ಅನುಸರಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ಈಜಿಪ್ಟ್ ದೇಶದಿಂದ ಅವರನ್ನು ಹೊರಗೆ ತಂದ ಕಾರಣ, ಇದು ಯೆಹೋವ ದೇವರಿಗೆ ಆಚರಿಸಬೇಕಾದ ರಾತ್ರಿಯಾಗಿತ್ತು. ಇಸ್ರಾಯೇಲರು ತಮ್ಮ ಸಂತತಿಗಳಲ್ಲಿ ಯೆಹೋವ ದೇವರಿಗೆ ಆಚರಿಸಬೇಕಾದ ರಾತ್ರಿಯು ಇದೇ.