Exodus 12:46 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಪಸ್ಕಹಬ್ಬದ ಊಟವನ್ನು ಮನೆಯೊಳಗೆ ತಿನ್ನಬೇಕು. ಪಸ್ಕದ ಮಾಂಸವನ್ನು ಮನೆಯಿಂದ ಹೊರಗೆ ತೆಗೆದುಕೊಂಡು ಹೋಗಕೂಡದು. ಕುರಿಮರಿಯ ಎಲುಬುಗಳಲ್ಲಿ ಯಾವುದನ್ನೂ ಮುರಿಯಬಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರವರ ಮನೆಯಲ್ಲಿಯೇ ಅದನ್ನು ಊಟಮಾಡಬೇಕು. ಅದರಲ್ಲಿ ಸ್ವಲ್ಪ ಮಾಂಸವನ್ನಾದರೂ ಮನೆಯಿಂದ ಹೊರಗೆ ತೆಗೆದುಕೊಂಡು ಹೋಗಬಾರದು. ಆ ಪಶುವಿನ ಒಂದು ಎಲುಬನ್ನಾದರೂ ಮುರಿಯಬಾರದು.
Kannada BSI Bible 2016
ಒಂದೇ ಮನೆಯಲ್ಲಿ ಅದನ್ನು ತಿನ್ನಬೇಕು. ಆ ಮಾಂಸ ದಲ್ಲಿ ಸ್ವಲ್ಪ ಅಂಶವನ್ನಾದರೂ ಮನೆಯ ಹೊರಗೆ ತೆಗೆದುಕೊಂಡು ಹೋಗಬಾರದು. ಪಶುವಿನ ಒಂದು ಎಲುಬಾದರೂ ಮುರಿಯಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಂದೇ ಮನೆಯಲ್ಲಿ ಅದನ್ನು ಊಟಮಾಡಬೇಕು; ಅದರಲ್ಲಿ ಸ್ವಲ್ಪವನ್ನಾದರೂ ಮನೆಯಿಂದ ಹೊರಗೆ ತೆಗೆದುಕೊಂಡು ಹೋಗಕೂಡದು. ಆ ಪಶುವಿನ ಒಂದು ಎಲುಬನ್ನಾದರೂ ಮುರಿಯಕೂಡದು.
Kannada Bible (KNCL) BSI 2016
ಅಡಿಗೆ ಮಾಡಿದ ಮನೆಯಲ್ಲೆ ಅದನ್ನು ಊಟಮಾಡಬೇಕು. ಅದರಲ್ಲಿ ಕಿಂಚಿತ್ತನ್ನೂ ಆ ಮನೆಯಿಂದ ಹೊರಗೆ ತೆಗೆದುಕೊಂಡು ಹೋಗಬಾರದು. ಬಲಿಪ್ರಾಣಿಯ ಎಲುಬೊಂದನ್ನಾದರೂ ಮುರಿಯಕೂಡದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಒಂದೇ ಮನೆಯಲ್ಲಿ ಅದನ್ನು ತಿನ್ನಬೇಕು. ಆ ಮಾಂಸದಲ್ಲಿ ಸ್ವಲ್ಪ ಅಂಶವನ್ನಾದರೂ ಮನೆಯ ಹೊರಗೆ ತೆಗೆದುಕೊಂಡು ಹೋಗಬಾರದು. ಪಶುವಿನ ಎಲುಬುಗಳಲ್ಲಿ ಒಂದನ್ನಾದರೂ ಮುರಿಯಬಾರದು.