Exodus 13:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ನಿಮ್ಮ ಚೊಚ್ಚಲು ಗಂಡುಮಕ್ಕಳನ್ನು ಆತನಿಗಾಗಿ ಮೀಸಲಿಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮಲ್ಲಿಯೂ ನಿಮ್ಮ ಪಶುಗಳಲ್ಲಿಯೂ ಹುಟ್ಟುವ ಪ್ರಥಮ ಗರ್ಭಫಲವು ಗಂಡಾದ ಪಕ್ಷಕ್ಕೆ ಅದು ಯೆಹೋವನ ಭಾಗವೆಂದು ತಿಳಿದುಕೊಂಡು ಅದನ್ನು ಆತನಿಗೆ ಸಮರ್ಪಿಸಬೇಕು.
Kannada BSI Bible 2016
ಗರ್ಭ ತೆರೆಯುವದೆಲ್ಲಾ ಅಂದರೆ ನಿನಗಿರುವ ಪಶುಗಳಲ್ಲಿ ಮೊದಲು ಹುಟ್ಟಿದ್ದನ್ನೆಲ್ಲಾ ಪ್ರತ್ಯೇಕಿಸಬೇಕು. ಗಂಡಾದವುಗಳು ಕರ್ತನವುಗಳೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮಲ್ಲಿಯೂ ನಿಮ್ಮ ಪಶುಗಳಲ್ಲಿಯೂ ಹುಟ್ಟುವ ಪ್ರಥಮಗರ್ಭವನ್ನೆಲ್ಲಾ ಗಂಡಾದ ಪಕ್ಷಕ್ಕೆ ಯೆಹೋವನ ಭಾಗವೆಂದು ತಿಳಿದುಕೊಂಡು ಆತನಿಗೆ ಸಮರ್ಪಿಸಬೇಕು.
Kannada Bible (KNCL) BSI 2016
ನಿಮಗೂ ನಿಮ್ಮ ಪಶುಪ್ರಾಣಿಗಳಿಗೂ ಹುಟ್ಟುವ ಚೊಚ್ಚಲು ಫಲವನ್ನೆಲ್ಲ, ಅವು ಗಂಡಾದ ಪಕ್ಷಕ್ಕೆ, ಸರ್ವೇಶ್ವರನ ಪಾಲೆಂದು ತಿಳಿದು ಅವರಿಗೆ ಸಮರ್ಪಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮಲ್ಲಿಯೂ ನಿಮ್ಮ ಪಶುಪ್ರಾಣಿಗಳಲ್ಲಿಯೂ ಹುಟ್ಟುವ ಪ್ರತಿಯೊಂದು ಗರ್ಭದ ಪ್ರಥಮ ಫಲವನ್ನು ನೀವು ಯೆಹೋವ ದೇವರಿಗೆ ಕೊಡಬೇಕು.