Exodus 13:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲರು ಈಜಿಪ್ಟನ್ನು ಬಿಟ್ಟುಹೋಗುವಂತೆ ಫರೋಹನು ಅನುಮತಿ ನೀಡಿದನು. ಇಸ್ರೇಲರು ಫಿಲಿಷ್ಟಿಯರ ದೇಶದ ಮೂಲಕ ಹಾದುಹೋಗುವ ರಸ್ತೆಯಲ್ಲಿ ಹೋಗಲು ಯೆಹೋವನು ಅನುಮತಿ ನೀಡಲಿಲ್ಲ. ಸಮುದ್ರದ ಮೂಲಕ ಹಾದುಹೋಗುವ ಆ ರಸ್ತೆ ಬಹಳ ಹತ್ತಿರವಾಗಿತ್ತು. ಆದರೆ ಯೆಹೋವನು, “ಇಸ್ರೇಲರು ಆ ದಾರಿಯಲ್ಲಿ ಹೋದರೆ, ಯುದ್ಧಮಾಡಬೇಕಾಗುವುದು. ಆಗ ಅವರು ತಮ್ಮ ಮನಸ್ಸುಗಳನ್ನು ಬದಲಾಯಿಸಿ ಈಜಿಪ್ಟಿಗೆ ಹಿಂತಿರುಗಬಹುದು” ಅಂದುಕೊಂಡನು. ಈಜಿಪ್ಟಿನಿಂದ ಪ್ರಯಾಣ
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಫರೋಹನು ಇಸ್ರಾಯೇಲರಿಗೆ ಹೋಗುವುದಕ್ಕೆ ಅಪ್ಪಣೆ ಕೊಟ್ಟಾಗ, ಫಿಲಿಷ್ಟಿಯರ ದೇಶದ ಮಾರ್ಗವು ಸಮೀಪವಾಗಿದ್ದರೂ ದೇವರು ಆ ದಾರಿಯಲ್ಲಿ ಅವರನ್ನು ಹೋಗಗೊಡಿಸಲಿಲ್ಲ. ಏಕೆಂದರೆ, “ದೇವರು, ಜನರು ಯುದ್ಧವನ್ನು ನೋಡಿ ಗಾಬರಿಯಾಗಿ ಮನಸ್ಸನ್ನು ಬದಲಾಯಿಸಿಕೊಂಡು ಐಗುಪ್ತಕ್ಕೆ ಹಿಂದಿರುಗಿ ಹೋದಾರೂ” ಎಂದು ಹೇಳಿದನು.
Kannada BSI Bible 2016
ಫರೋಹನು ಜನರನ್ನು ಕಳುಹಿಸಿಬಿಟ್ಟಾಗ ಫಿಲಿಷ್ಟಿಯರ ದೇಶದ ದಾರಿಯು ಸವಿಾಪವಿದ್ದರೂ ದೇವರು ಅವರನ್ನು ಅದರಲ್ಲಿ ನಡಿಸಲಿಲ್ಲ; ಯಾಕಂದರೆ ದೇವರು--ಜನರು ಯುದ್ಧವನ್ನು ನೋಡಿ ಮನಸ್ಸನ್ನು ಬೇರೆ ಮಾಡಿಕೊಂಡು ಅವರು ಐಗುಪ್ತಕ್ಕೆ ಹಿಂದಿರುಗಾರು ಎಂದು ಅಂದುಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಫರೋಹನು ಇಸ್ರಾಯೇಲ್ಯರಿಗೆ ಹೋಗುವದಕ್ಕೆ ಅಪ್ಪಣೆ ಕೊಟ್ಟಾಗ ಫಿಲಿಷ್ಟಿಯರ ದೇಶದೊಳಗಣ ಮಾರ್ಗ ಹತ್ತಿರವಿದ್ದರೂ ದೇವರು ಆ ದಾರಿಯಲ್ಲಿ ಅವರನ್ನು ನಡಿಸದೆ ಕೆಂಪುಸಮುದ್ರದ ಬಳಿಯಲ್ಲಿರುವ ಮರಳು ಕಾಡಿನ ದಾರಿಯಲ್ಲಿಯೇ ಸುತ್ತಾಗಿ ನಡಿಸಿಕೊಂಡುಹೋದನು.
Kannada Bible (KNCL) BSI 2016
ಫರೋಹನು ಇಸ್ರಯೇಲರಿಗೆ ಹೋಗಲು ಅಪ್ಪಣೆಕೊಟ್ಟಾಗ ದೇವರು ಅವರನ್ನು ಹತ್ತಿರವಾಗಿದ್ದ ಫಿಲಿಷ್ಟಿಯರ ಪ್ರಾಂತ್ಯದ ಮಾರ್ಗವಾಗಿ ಕರೆದುತರಲಿಲ್ಲ. ಬದಲಿಗೆ ಕೆಂಪು ಸಮುದ್ರದ ಬಳಿಯಿರುವ ಮರುಳುಗಾಡಿನ ಬಳಸು ದಾರಿಯಲ್ಲೇ ನಡೆಸಿಕೊಂಡು ಬಂದರು. ಏಕೆಂದರೆ, “ಯುದ್ಧ ತೊಡಗಿದರೆ ಇವರು ಎದೆಗೆಟ್ಟು ಈಜಿಪ್ಟಿಗೆ ಹಿಂದಿರುಗಿಯಾರು” ಎಂದುಕೊಂಡರು ದೇವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಫರೋಹನು ಜನರನ್ನು ಕಳುಹಿಸಿಬಿಟ್ಟಾಗ, ಫಿಲಿಷ್ಟಿಯರ ದೇಶದ ದಾರಿಯು ಸಮೀಪವಿದ್ದರೂ ದೇವರು ಅವರನ್ನು ಅದರಲ್ಲಿ ನಡೆಸಲಿಲ್ಲ. ಏಕೆಂದರೆ ದೇವರು, “ಜನರು ಯುದ್ಧವನ್ನು ನೋಡಿ, ಮನಸ್ಸನ್ನು ಬೇರೆಮಾಡಿಕೊಂಡು, ಈಜಿಪ್ಟಿಗೆ ಹಿಂದಿರುಗಿಯಾರು,” ಎಂದು ಹೇಳಿದರು.