Exodus 13:2 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಇಸ್ರೇಲರಲ್ಲಿ ಹುಟ್ಟಿದ ಚೊಚ್ಚಲು ಗಂಡುಮಕ್ಕಳೆಲ್ಲಾ ನನಗೆ ಮೀಸಲಾಗಿರಬೇಕು; ಪ್ರತಿಯೊಬ್ಬ ಚೊಚ್ಚಲು ಮಗನು ನನ್ನವನೇ. ಪ್ರತಿಯೊಂದು ಚೊಚ್ಚಲು ಪಶುವು ನನ್ನದೇ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಇಸ್ರಾಯೇಲರಲ್ಲಿ ಹುಟ್ಟಿರುವ ಪ್ರತಿಯೊಂದು ಚೊಚ್ಚಲ ಗಂಡನ್ನು ನನಗಾಗಿ ಪ್ರತಿಷ್ಠಿಸಬೇಕು. ಮನುಷ್ಯರಲ್ಲಾಗಲೀ, ಪಶುಗಳಲ್ಲಾಗಲೀ ಹುಟ್ಟುವ ಪ್ರಥಮ ಗರ್ಭಫಲವು ನನ್ನದಾಗಿದೆ” ಎಂದು ಹೇಳಿದನು.
Kannada BSI Bible 2016
ಇಸ್ರಾಯೇಲ್ ಮಕ್ಕಳಲ್ಲಿ ಗಂಡಸರಲ್ಲಿಯೂ ಪಶುಗಳಲ್ಲಿಯೂ ಗರ್ಭ ತೆರೆಯುವ ಚೊಚ್ಚಲಾದದ್ದನ್ನೆಲ್ಲಾ ನನಗಾಗಿ ಪರಿಶುದ್ಧ ಮಾಡು; ಅದು ನನ್ನದೇ ಅಂದನು.
Kannada Bible (KNCL) BSI 2016
“ಚೊಚ್ಚಲಾಗಿ ಹುಟ್ಟಿದ್ದೆಲ್ಲವನ್ನು ನನಗೆ ಮೀಸಲಾಗಿಡು; ಇಸ್ರಯೇಲರಲ್ಲಿ ಮನುಷ್ಯರಿಗಾಗಲಿ ಪಶುಪ್ರಾಣಿಗಳಿಗಾಗಲಿ ಹುಟ್ಟಿದ ಪ್ರಥಮ ಗರ್ಭಫಲ ನನ್ನದೇ,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇಸ್ರಾಯೇಲರಲ್ಲಿ ಹುಟ್ಟಿರುವ ಪ್ರತಿಯೊಂದು ಚೊಚ್ಚಲ ಗಂಡನ್ನು ನನಗಾಗಿ ಮೀಸಲಾಗಿಡು. ಮನುಷ್ಯರಾಗಿರಲಿ, ಪಶುಪ್ರಾಣಿಗಳಾಗಿರಲಿ ಪ್ರಥಮ ಗರ್ಭಫಲವು ನನ್ನದಾಗಿದೆ,” ಎಂದರು.