Exodus 13:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಹುಳಿಯಿರುವ ರೊಟ್ಟಿಯನ್ನು ಏಳು ದಿನಗಳವರೆಗೆ ತಿನ್ನಬಾರದು. ನಿಮ್ಮ ದೇಶದಲ್ಲಿ ಹುಳಿಯಿರುವ ರೊಟ್ಟಿ ಇರಲೇಕೂಡದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಏಳು ದಿನವೂ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮಾತ್ರವಲ್ಲದೆ, ನಿಮ್ಮಲ್ಲಿ ಹುಳಿಹಿಟ್ಟು ಕಾಣಿಸಬಾರದು. ಇಲ್ಲವೆ ಹುಳಿಹಿಟ್ಟು ನಿಮ್ಮ ಗಡಿಯಲ್ಲೇ ಕಾಣಬಾರದು.
Kannada BSI Bible 2016
ಹುಳಿಯಿಲ್ಲದ ರೊಟ್ಟಿಯನ್ನು ಆ ಏಳು ದಿನಗಳಲ್ಲಿ ತಿನ್ನಬೇಕು, ನಿನ್ನ ಬಳಿಯಲ್ಲಿ ಹುಳಿ ರೊಟ್ಟಿಯು ಕಾಣಿಸಬಾರದು. ಇಲ್ಲವೆ ಹುಳಿ ಹಿಟ್ಟು ನಿನ್ನ ಯಾವ ಮೇರೆಯಲ್ಲೂ ಕಾಣಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಏಳು ದಿವಸವೂ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕೇ ಹೊರತು ನಿಮ್ಮ ದೇಶದಲ್ಲೆಲ್ಲಾ ಹುಳಿಹಿಟ್ಟಾಗಲಿ ಹುಳಿಯಾಗಲಿ ನಿಮ್ಮ ಬಳಿಯಲ್ಲಿ ಇರಲೇಕೂಡದು.
Kannada Bible (KNCL) BSI 2016
ಆ ಏಳು ದಿವಸವು ಹಿಳಿಯಿಲ್ಲದ ರೊಟ್ಟಿಗಳನ್ನೇ ತಿನ್ನಬೇಕು. ಮಾತ್ರವಲ್ಲ ನಿಮ್ಮ ಬಳಿಯಲ್ಲಿ ಅಥವಾ ನಿಮ್ಮ ನಾಡಿನಲ್ಲಿ ಹುಳಿಯಾಗಲಿ ಹುಳಿ ಹಿಟ್ಟಾಗಲಿ ಇರಕೂಡದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಏಳು ದಿನಗಳಲ್ಲಿ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಬೇಕು. ಅಲ್ಲದೆ ನಿಮ್ಮ ಬಳಿಯಲ್ಲಿ ಹುಳಿಯಾಗಲಿ ಇಲ್ಲವೆ ಹುಳಿಹಿಟ್ಟಾಗಲಿ ನಿಮ್ಮ ಯಾವ ಮೇರೆಯಲ್ಲೂ ಕಾಣಬಾರದು.