Exodus 14:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಯೆಹೋವನು ಮೋಶೆಗೆ, “ನಿನ್ನ ಕೈಯನ್ನು ಸಮುದ್ರದ ಮೇಲೆ ಚಾಚು; ನೀರು ಈಜಿಪ್ಟಿನವರ ರಥಗಳನ್ನು ಮತ್ತು ರಾಹುತರನ್ನು ಮುಚ್ಚಿಕೊಳ್ಳುವುದು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಷ್ಟರಲ್ಲಿ ಯೆಹೋವನು ಮೋಶೆಗೆ, “ಸಮುದ್ರದ ಮೇಲೆ ನಿನ್ನ ಕೈಚಾಚು, ಆಗ ಅದರ ನೀರು ಮೊದಲಿನಂತೆ ಬಂದು ಐಗುಪ್ತ್ಯರನ್ನೂ, ಅವರ ರಥಗಳನ್ನೂ, ರಾಹುತರನ್ನೂ ಮುಳುಗಿಸುವುದು” ಎಂದು ಹೇಳಿದನು.
Kannada BSI Bible 2016
ಆಗ ಕರ್ತನು ಮೋಶೆಗೆ--ಐಗುಪ್ತ್ಯರ ಮೇಲೆಯೂ ಅವರ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನೀರು ತಿರಿಗಿ ಬರುವಹಾಗೆ ಸಮುದ್ರದ ಮೇಲೆ ಕೈಚಾಚು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಷ್ಟರಲ್ಲಿ ಯೆಹೋವನು ಮೋಶೆಗೆ - ಸಮುದ್ರದ ಮೇಲೆ ನಿನ್ನ ಕೈ ಚಾಚು; ಆಗ ಅದರ ನೀರು ಮೊದಲಿನಂತೆ ಬಂದು ಐಗುಪ್ತ್ಯರನ್ನೂ ಅವರ ರಥಗಳನ್ನೂ ರಾಹುತರನ್ನೂ ಮುಣುಗಿಸುವದೆಂದು ಹೇಳಿದನು. ಮೋಶೆ ಸಮುದ್ರದ ಮೇಲೆ ಕೈಚಾಚಿದನು.
Kannada Bible (KNCL) BSI 2016
ಅಷ್ಟರಲ್ಲಿ ಸರ್ವೇಶ್ವರ, “ಸಮುದ್ರದ ಮೇಲೆ ನಿನ್ನ ಕೈಚಾಚು; ಆಗ ಅದರ ನೀರು ಮೊದಲಿನಂತೆ ಬಂದು ಈಜಿಪ್ಟಿನವರನ್ನೂ ಅವರ ರಥಗಳನ್ನೂ, ರಾಹುತರನ್ನೂ ಮುಳುಗಿಸುವುದು,” ಎಂದು ಮೋಶೆಗೆ ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರು ಮೋಶೆಗೆ, “ಈಜಿಪ್ಟಿನವರನ್ನೂ ಅವರ ರಥಗಳ ಕುದುರೆಯ ಸವಾರರನ್ನೂ ಸಮುದ್ರವು ಮುಳುಗಿಸುವಂತೆ ಸಮುದ್ರದ ಮೇಲೆ ಕೈಚಾಚು,” ಎಂದರು.