Exodus 14:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಹಗಲಿನ ಬೆಳಕು ಪ್ರಕಾಶಿಸುವುದಕ್ಕಿಂತ ಸ್ವಲ್ಪ ಮೊದಲು, ಮೋಶೆಯು ತನ್ನ ಕೈಯನ್ನು ಸಮುದ್ರದ ಮೇಲೆ ಚಾಚಿದನು. ನೀರು ತನ್ನ ಸರಿಯಾದ ಮಟ್ಟಕ್ಕೆ ಹಿಂತಿರುಗಿತು. ಈಜಿಪ್ಟಿನವರು ನೀರಿನಿಂದ ಓಡಿಹೋಗಲು ಬಹಳವಾಗಿ ಪ್ರಯತ್ನಿಸಿದರು. ಆದರೆ ಯೆಹೋವನು ಈಜಿಪ್ಟಿನವರನ್ನು ಸಮುದ್ರದಲ್ಲಿ ಕೆಡವಿಬಿಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆ ಸಮುದ್ರದ ಮೇಲೆ ಕೈಚಾಚಿದನು. ಬೆಳಗಾಗುವಾಗಲೇ ಸಮುದ್ರದ ನೀರು ಮೊದಲಿದ್ದಂತೆಯೇ ತುಂಬಿಕೊಂಡಿತು. ಐಗುಪ್ತ್ಯರು ಓಡಿಹೋಗುತ್ತಾ ಅದರ ಎದುರಾಗಿಯೇ ಬಂದರು. ಹೀಗೆ ಯೆಹೋವನು ಐಗುಪ್ತ್ಯರನ್ನು ಸಮುದ್ರದೊಳಗೆ ತಳ್ಳಿಬಿಟ್ಟನು.
Kannada BSI Bible 2016
ಆಗ ಮೋಶೆಯು ಸಮುದ್ರದ ಮೇಲೆ ಕೈಚಾಚಲಾಗಿ ಸಮುದ್ರವು ಬೆಳಗಾಗುವಾಗಲೇ ತನ್ನ ಶಕ್ತಿಗೆ ತಿರುಗಿಕೊಂಡಿತು. ಐಗುಪ್ತ್ಯರು ಅದಕ್ಕೆದುರಾಗಿ ಓಡಿಹೋದರು. ಕರ್ತನು ಐಗುಪ್ತ್ಯರನ್ನು ಸಮುದ್ರದ ಮಧ್ಯದಲ್ಲಿ ಸಂಹರಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೆಳಗಾಗುವಾಗಲೇ ಸಮುದ್ರದ ನೀರು ಮೊದಲಿದ್ದಂತೆಯೇ ತುಂಬಿಕೊಳ್ಳಲು ಐಗುಪ್ತ್ಯರು ಓಡಿಹೋಗುತ್ತಾ ಅದರ ಎದುರಾಗಿಯೇ ಬಂದರು. ಹೀಗೆ ಯೆಹೋವನು ಐಗುಪ್ತ್ಯರನ್ನು ಸಮುದ್ರದೊಳಗೆ ಕೆಡವಿಬಿಟ್ಟನು.
Kannada Bible (KNCL) BSI 2016
ಅಂತೆಯೇ ಮೋಶೆ ಸಮುದ್ರದ ಮೇಲೆ ಕೈ ಚಾಚಿದನು. ಬೆಳಗಾಗುವಾಗಲೇ ಸಮುದ್ರದ ನೀರು ಮೊದಲಿದ್ದಂತೆಯೇ ತುಂಬಿಕೊಂಡಿತು. ಈಜಿಪ್ಟಿನವರು ಓಡಿಹೋಗುತ್ತಾ ಅದಕ್ಕೆ ಎದುರಾಗಿಯೇ ಬಂದರು. ಹೀಗೆ ಸರ್ವೇಶ್ವರ ಈಜಿಪ್ಟಿನವರನ್ನು ಸಮುದ್ರದೊಳಗೆ ಕೆಡವಿಬಿಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಮೋಶೆಯು ಸಮುದ್ರದ ಮೇಲೆ ಕೈಚಾಚಲಾಗಿ ಸಮುದ್ರವು ಬೆಳಗಾಗುವಾಗಲೇ ಮೊದಲಿನಂತೆ ತುಂಬಿಕೊಂಡಿತು. ಈಜಿಪ್ಟಿನವರು ಓಡಿಹೋಗುತ್ತಾ ಅದಕ್ಕೆ ಎದುರಾಗಿಯೇ ಬಂದರು. ಹೀಗೆ ಯೆಹೋವ ದೇವರು ಈಜಿಪ್ಟಿನವರನ್ನು ಸಮುದ್ರದೊಳಗೆ ಕೆಡವಿಬಿಟ್ಟರು.