Exodus 14:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀರು ತನ್ನ ಸರಿಯಾದ ಮಟ್ಟಕ್ಕೆ ಹಿಂತಿರುಗಿ ರಥಗಳನ್ನು ಮತ್ತು ರಾಹುತರನ್ನು ಮುಚ್ಚಿಬಿಟ್ಟಿತು. ಸಮುದ್ರದೊಳಗೆ ಹೋಗಿದ್ದ ಇಸ್ರೇಲರನ್ನು ಬೆನ್ನಟ್ಟಿದ ಫರೋಹನ ಸೈನ್ಯವೆಲ್ಲಾ ನಾಶವಾಯಿತು. ಅವರಲ್ಲಿ ಒಬ್ಬರಾದರೂ ಉಳಿಯಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀರು ಮೊದಲಿನಂತೆ ಬಂದು ಆ ರಥಗಳನ್ನೂ, ರಾಹುತರನ್ನೂ, ಅವರ ಹಿಂದೆ ಸಮುದ್ರದೊಳಗೆ ಹೋಗಿದ್ದ ಫರೋಹನ ಸೈನ್ಯದವರೆಲ್ಲರನ್ನೂ ಮುಳುಗಿಸಿಬಿಟ್ಟಿತ್ತು, ಅವರಲ್ಲಿ ಒಬ್ಬರಾದರೂ ಉಳಿಯಲಿಲ್ಲ.
Kannada BSI Bible 2016
ನೀರು ತಿರಿಗಿ ಬಂದು ರಥಗಳೂ ಕುದುರೆಗಳೂ ಸವಾರರೂ ಅವರ ಹಿಂದೆ ಸಮುದ್ರದಲ್ಲಿ ಬರುತ್ತಿದ್ದ ಫರೋಹನ ಎಲ್ಲಾ ಸೈನ್ಯವೂ ಒಬ್ಬರೂ ಉಳಿಯದಂತೆ ಮುಚ್ಚಿಕೊಂಡಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀರು ಮೊದಲಿನಂತೆ ಬಂದು ಆ ರಥಗಳನ್ನೂ ರಾಹುತರನ್ನೂ ಅವರ ಹಿಂದೆ ಸಮುದ್ರದೊಳಗೆ ಹೋಗಿದ್ದ ಫರೋಹನ ಸೈನ್ಯದವರೆಲ್ಲರನ್ನೂ ಮುಣುಗಿಸಿತು. ಅವರಲ್ಲಿ ಒಬ್ಬರಾದರೂ ಉಳಿಯಲಿಲ್ಲ.
Kannada Bible (KNCL) BSI 2016
ನೀರು ಮೊದಲಿನಂತೆ ಬಂದು ಆ ರಥಗಳನ್ನು, ರಾಹುತರನ್ನು ಹಾಗು ಅವರ ಹಿಂದೆ ಸಮುದ್ರದೊಳಗೆ ಹೋಗಿದ್ದ ಫರೋಹನ ಸೈನ್ಯದವರೆಲ್ಲರನ್ನು ಮುಳುಗಿಸಿತು. ಅವರಲ್ಲಿ ಒಬ್ಬರಾದರೂ ಉಳಿಯಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀರು ತಿರುಗಿಬಂದು ರಥಗಳೂ ಕುದುರೆಗಳೂ ಸವಾರರೂ ಅವರ ಹಿಂದೆ ಸಮುದ್ರದಲ್ಲಿ ಬರುತ್ತಿದ್ದ ಫರೋಹನ ಎಲ್ಲಾ ಸೈನ್ಯವೂ ಹೀಗೆ ಒಬ್ಬರೂ ಉಳಿಯದಂತೆ ಮುಳುಗಿಸಿತು.