Exodus 14:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲರು ಅರಣ್ಯದಲ್ಲಿ ದಾರಿ ತಪ್ಪಿದರು; ಅವರಿಗೆ ಹೋಗಲು ಯಾವ ಸ್ಥಳವೂ ಇರುವುದಿಲ್ಲ ಎಂದು ಫರೋಹನು ಭಾವಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಫರೋಹನು ಅದನ್ನು ಕಂಡು ಇಸ್ರಾಯೇಲರನ್ನು ಕುರಿತು, ‘ಅವರಿಗೆ ದಾರಿತಪ್ಪಿದೆ, ಎಲ್ಲಾ ಕಡೆಯಲ್ಲಿಯೂ ಮರುಭೂಮಿ ಅವರನ್ನು ಸುತ್ತುವರಿದಿದೆ’ ಎಂದು ಅಂದುಕೊಳ್ಳುವನು.
Kannada BSI Bible 2016
ಫರೋಹನು ಇಸ್ರಾಯೇಲ್ ಮಕ್ಕಳ ವಿಷಯದಲ್ಲಿ--ಅವರು ದೇಶದಲ್ಲಿ ಸಿಕ್ಕಿಕೊಂಡರು. ಅರಣ್ಯವು ಅವರನ್ನು ಒಳಗೆ ಮುಚ್ಚಿಬಿಟ್ಟಿತು ಎಂದು ಹೇಳುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಫರೋಹನು ಅದನ್ನು ಕಂಡು - ಇಸ್ರಾಯೇಲ್ಯರಿಗೆ ದಾರಿತಪ್ಪಿತು, ಎಲ್ಲಾ ಕಡೆಯಲ್ಲಿಯೂ ಅರಣ್ಯವು ಅವರನ್ನು ಸುತ್ತಿಕೊಂಡದೆ ಅಂದುಕೊಳ್ಳುವನು.
Kannada Bible (KNCL) BSI 2016
ಫರೋಹನು ಅದನ್ನು ಕಂಡು, ‘ಇಸ್ರಯೇಲರಿಗೆ ದಾರಿತಪ್ಪಿತು, ಸುತ್ತಲೂ ಮರುಭೂಮಿ ಅವರನ್ನು ಆವರಿಸಿದೆ” ಎಂದುಕೊಳ್ಳುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಫರೋಹನು ಇಸ್ರಾಯೇಲರ ವಿಷಯದಲ್ಲಿ, ‘ಅವರು ಗಲಿಬಿಲಿಗೊಂಡು ಮರುಭೂಮಿಯನ್ನು ಸುತ್ತುವರಿದ ಪ್ರದೇಶದಲ್ಲಿ ಅತ್ತಿತ್ತ ಹೋಗುತ್ತಿರುವರು,’ ಎಂದುಕೊಳ್ಳುವನು.