Exodus 14:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಆ ದಿನ ಯೆಹೋವನು ಇಸ್ರೇಲರನ್ನು ಈಜಿಪ್ಟಿನವರಿಂದ ರಕ್ಷಿಸಿದನು. ಇಸ್ರೇಲರು ಕೆಂಪುಸಮುದ್ರದ ದಡದಲ್ಲಿ ಬಿದ್ದಿದ್ದ ಈಜಿಪ್ಟಿನವರ ಹೆಣಗಳನ್ನು ನೋಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದಿನದಲ್ಲಿ ಯೆಹೋವನು ಇಸ್ರಾಯೇಲ್ಯರನ್ನು ಐಗುಪ್ತ್ಯರ ಕೈಯಿಂದ ರಕ್ಷಿಸಿದನು. ಐಗುಪ್ತ್ಯರು ಸತ್ತು ಸಮುದ್ರ ತೀರದಲ್ಲಿ ಬಿದ್ದಿರುವುದನ್ನು ಇಸ್ರಾಯೇಲರು ನೋಡಿದರು.
Kannada BSI Bible 2016
ಆ ದಿನದಲ್ಲಿ ಕರ್ತನು ಈ ಪ್ರಕಾರ ಇಸ್ರಾಯೇಲ್ಯ ರನ್ನು ಐಗುಪ್ತ್ಯರ ಕೈಯಿಂದ ರಕ್ಷಿಸಿದನು. ಇಸ್ರಾಯೇ ಲ್ಯರು ಸಮುದ್ರತೀರದಲ್ಲಿ ಸತ್ತ ಐಗುಪ್ತ್ಯರನ್ನು ನೋಡಿ ದರು.ಐಗುಪ್ತ್ಯರ ಮೇಲೆ ಕರ್ತನು ಮಾಡಿದ ದೊಡ್ಡ ಕಾರ್ಯವನ್ನು ಇಸ್ರಾಯೇಲ್ಯರು ನೋಡಿ ಕರ್ತ ನಿಗೆ ಭಯಪಟ್ಟು ಕರ್ತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯಿಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದಿನದಲ್ಲಿ ಯೆಹೋವನು ಇಸ್ರಾಯೇಲ್ಯರನ್ನು ಐಗುಪ್ತ್ಯರ ಕೈಗೆ ತಪ್ಪಿಸಿದನು. ಐಗುಪ್ತ್ಯರು ಸತ್ತು ಸಮುದ್ರತೀರದಲ್ಲಿ ಬಿದ್ದಿರುವದನ್ನು ಇಸ್ರಾಯೇಲ್ಯರು ಕಂಡರು.
Kannada Bible (KNCL) BSI 2016
ಆ ದಿನ ಸರ್ವೇಶ್ವರ ಸ್ವಾಮಿ ಇಸ್ರಯೇಲರನ್ನು ಈಜಿಪ್ಟಿನವರ ಕೈಯಿಂದ ರಕ್ಷಿಸಿದರು. ಈಜಿಪ್ಟಿನವರು ಸತ್ತು ಸಮುದ್ರ ತೀರದಲ್ಲಿ ಬಿದ್ದಿರುವುದನ್ನು ಇಸ್ರಯೇಲರು ಕಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದಿನದಲ್ಲಿ ಯೆಹೋವ ದೇವರು ಈ ಪ್ರಕಾರ ಇಸ್ರಾಯೇಲರನ್ನು ಈಜಿಪ್ಟಿನವರ ಕೈಯಿಂದ ರಕ್ಷಿಸಿದರು. ಇಸ್ರಾಯೇಲರು ಸಮುದ್ರ ತೀರದಲ್ಲಿ ಸತ್ತ ಈಜಿಪ್ಟಿನವರನ್ನು ನೋಡಿದರು.