Exodus 14:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈಜಿಪ್ಟಿನವರನ್ನು ಯೆಹೋವನು ಸೋಲಿಸಿದಾಗ ಇಸ್ರೇಲರು ಆತನ ಮಹಾಶಕ್ತಿಯನ್ನು ನೋಡಿದರು. ಆದ್ದರಿಂದ ಜನರು ಯೆಹೋವನನ್ನು ಸನ್ಮಾನಿಸಿ ಆತನ ಸೇವಕನಾದ ಮೋಶೆಯಲ್ಲಿ ಭರವಸವಿಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಐಗುಪ್ತ್ಯರಲ್ಲಿ ಮಾಡಿದ ಈ ಪರಾಕ್ರಮ ಕಾರ್ಯವನ್ನು ಇಸ್ರಾಯೇಲರು ನೋಡಿ ಯೆಹೋವನಿಗೆ ಭಯಪಟ್ಟು ಆತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯನ್ನಿಟ್ಟರು.
Kannada BSI Bible 2016
ಐಗುಪ್ತ್ಯರ ಮೇಲೆ ಕರ್ತನು ಮಾಡಿದ ದೊಡ್ಡ ಕಾರ್ಯವನ್ನು ಇಸ್ರಾಯೇಲ್ಯರು ನೋಡಿ ಕರ್ತ ನಿಗೆ ಭಯಪಟ್ಟು ಕರ್ತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯಿಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಐಗುಪ್ತ್ಯರಲ್ಲಿ ಮಾಡಿದ ಈ ಪರಾಕ್ರಮಕಾರ್ಯವನ್ನು ಇಸ್ರಾಯೇಲ್ಯರು ನೋಡಿ ಯೆಹೋವನಿಗೆ ಭಯಪಟ್ಟು ಆತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯಿಟ್ಟರು.
Kannada Bible (KNCL) BSI 2016
ಸರ್ವೇಶ್ವರ ಈಜಿಪ್ಟಿನವರಲ್ಲಿ ಮಾಡಿದ ಈ ಪರಾಕ್ರಮ ಕಾರ್ಯವನ್ನು ಇಸ್ರಯೇಲರು ನೋಡಿ ಸರ್ವೇಶ್ವರನಿಗೆ ಭಯಪಟ್ಟು ಅವರಲ್ಲೂ ಅವರ ದಾಸ ಮೋಶೆಯಲ್ಲೂ ನಂಬಿಕೆಯಿಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಜಿಪ್ಟಿನವರ ಮೇಲೆ ಯೆಹೋವ ದೇವರು ಮಾಡಿದ ದೊಡ್ಡ ಕಾರ್ಯವನ್ನು ನೋಡಿದಾಗ, ಇಸ್ರಾಯೇಲರು ಯೆಹೋವ ದೇವರಿಗೆ ಭಯಪಟ್ಟು, ಅವರಲ್ಲಿಯೂ ಅವರ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯಿಟ್ಟರು.