Exodus 14:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಫರೋಹನು ತನ್ನ ಆರುನೂರು ರಥಗಳನ್ನೂ ಅವುಗಳ ಚಾಲಕರನ್ನೂ ಮತ್ತು ಅವುಗಳೊಡನೆ ಈಜಿಪ್ಟಿನ ಇತರ ರಥಗಳನ್ನೂ ತೆಗೆದುಕೊಂಡನು. ಪ್ರತಿಯೊಂದು ರಥದಲ್ಲಿ ಒಬ್ಬ ದಳಪತಿ ಇದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶ್ರೇಷ್ಠವಾದ ಆರುನೂರು ರಥಗಳನ್ನೂ, ಐಗುಪ್ತ ದೇಶದ ಎಲ್ಲಾ ರಥಗಳನ್ನೂ ತೆಗೆದುಕೊಂಡು ಬೆನ್ನಟ್ಟಿ ಹೋದನು. ಆ ಎಲ್ಲಾ ರಥಗಳಲ್ಲಿ ಅಧಿಪತಿಗಳನ್ನೂ ಕರೆಸಿ ಕೊಂಡನು.
Kannada BSI Bible 2016
ಇದಲ್ಲದೆ ಅವನು ಆರಿಸಿಕೊಂಡ ಆರು ನೂರು ರಥಗಳನ್ನೂ ಐಗುಪ್ತದ ಎಲ್ಲಾ ರಥಗಳನ್ನೂ ಅವುಗಳ ಮೇಲೆ ಅಧಿ ಪತಿಗಳನ್ನೂ ತೆಗೆದುಕೊಂಡು ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಶ್ರೇಷ್ಠವಾದ ಆರುನೂರು ರಥಗಳನ್ನೂ ಐಗುಪ್ತದೇಶದ ಎಲ್ಲಾ ರಥಗಳನ್ನೂ ತೆಗೆದುಕೊಂಡು ಹೋದನು. ಆ ಎಲ್ಲಾ ರಥಗಳಲ್ಲಿ ಭಟರಿದ್ದರು.
Kannada Bible (KNCL) BSI 2016
ಈಜಿಪ್ಟಿನ ಎಲ್ಲ ರಥಗಳನ್ನೂ ಆರುನೂರು ಶ್ರೇಷ್ಠರಥಗಳನ್ನು ತೆಗೆದುಕೊಂಡು ಹೋದನು. ಈ ಎಲ್ಲ ರಥಗಳಲ್ಲಿ ಸೇನಾನಿಗಳಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಅವನು ಆರಿಸಿಕೊಂಡ ಅತ್ಯುತ್ತಮ ಆರುನೂರು ರಥಗಳನ್ನೂ, ಈಜಿಪ್ಟಿನ ಎಲ್ಲಾ ರಥಗಳನ್ನೂ, ಅವುಗಳ ಮೇಲೆ ಅಧಿಪತಿಗಳನ್ನೂ ತೆಗೆದುಕೊಂಡನು.