Exodus 14:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈಜಿಪ್ಟಿನ ಸೈನ್ಯದಲ್ಲಿ ಅನೇಕ ರಾಹುತರು ಇದ್ದರು; ರಥಗಳೂ ಇದ್ದವು. ಅವರು ಇಸ್ರೇಲರನ್ನು ಬೆನ್ನಟ್ಟಿದರು. ಇಸ್ರೇಲರು ಪೀಹಹೀರೋತಿನ ಹತ್ತಿರವಿರುವ ಬಾಳ್ಚೆಫೋನಿನ ಎದುರಾಗಿ ಸಮುದ್ರತೀರದಲ್ಲಿ ಇಳಿದುಕೊಳ್ಳುವಾಗಲೇ ಈಜಿಪ್ಟಿನ ಸೈನ್ಯದವರು ಅವರ ಹತ್ತಿರಕ್ಕೆ ಬಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಐಗುಪ್ತ್ಯರು ಅಂದರೆ ಫರೋಹನ ಕುದುರೆಗಳೂ, ರಥಗಳೂ, ಅವನ ರಾಹುತರೂ, ಸೈನ್ಯದವರೆಲ್ಲರೂ ಅವರ ಹಿಂದೆ ಹೊರಟು ಇಸ್ರಾಯೇಲರು ಪೀಹಹೀರೋತಿನ ಹತ್ತಿರ ಬಾಳ್ಚೆಫೋನಿನ ಎದುರಾಗಿ ಸಮುದ್ರ ತೀರದಲ್ಲಿ ಇಳಿದುಕೊಳ್ಳುತ್ತಿರುವಾಗಲೇ ಅವರ ಸಮೀಪಕ್ಕೆ ಬಂದರು.
Kannada BSI Bible 2016
ಐಗುಪ್ತ್ಯರು ಅವರನ್ನು ಹಿಂದಟ್ಟಿದ್ದರು; ಅವರು ಸಮುದ್ರ ತೀರದಲ್ಲಿ ಇಳು ಕೊಂಡಿರುವಾಗ ಫರೋಹನ ಎಲ್ಲಾ ಕುದುರೆಗಳೂ ರಥಗಳೂ ಕುದುರೆ ಸವಾರರೂ ಅವನ ಸೈನ್ಯವೂ ಪೀಹಹೀರೋತಿನ ಸವಿಾಪದಲ್ಲಿ ಬಾಳ್ಚೆಫೋನಿನ ಎದುರಾಗಿ ಸವಿಾಪಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಐಗುಪ್ತ್ಯರು ಅಂದರೆ ಫರೋಹನ ಕುದುರೆಗಳೂ ರಥಗಳೂ ಅವನ ರಾಹುತರೂ ಸೈನ್ಯದವರೆಲ್ಲರೂ ಅವರ ಹಿಂದೆ ಹೊರಟು ಇಸ್ರಾಯೇಲ್ಯರು ಪೀಹಹೀರೋತಿನ ಹತ್ತಿರ ಬಾಳ್ಚೆಫೋನಿನ ಎದುರಾಗಿ ಸಮುದ್ರ ತೀರದಲ್ಲಿ ಇಳಿದುಕೊಳ್ಳುವಾಗಲೇ ಅವರ ಹತ್ತಿರಕ್ಕೆ ಬಂದರು.
Kannada Bible (KNCL) BSI 2016
ಈಜಿಪ್ಟಿನವರು, ಅಂದರೆ ಫರೋಹನ ಕುದುರೆಗಳು, ರಥಗಳು, ರಾಹುತರು, ಸೈನ್ಯದವರೆಲ್ಲರು ಅವನ ಹಿಂದೆ ಹೊರಟು ಇಸ್ರಯೇಲರ ಸಮೀಪಕ್ಕೆ ಬಂದರು; ಪೀಹಹೀರೋತಿನ ಬಳಿ ಬಾಳ್ಚೆಫೋನಿನ ಎದುರಾಗಿ ಸಮುದ್ರ ತೀರದಲ್ಲಿ ಇಳಿದುಕೊಳ್ಳುವಾಗಲೇ ಅವರ ಹತ್ತಿರಕ್ಕೆ ಬಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಜಿಪ್ಟಿನವರು ಅವರನ್ನು ಹಿಂದಟ್ಟಿದರು. ಅವರು ಸಮುದ್ರ ತೀರದಲ್ಲಿ ಇಳಿದುಕೊಂಡಿರುವಾಗ, ಫರೋಹನ ಎಲ್ಲಾ ಕುದುರೆಗಳೂ ರಥಗಳೂ ಕುದುರೆ ಸವಾರರೂ ಅವನ ಸೈನ್ಯವೂ ಪೀಹಹೀರೋತಿನ ಸಮೀಪದಲ್ಲಿ ಬಾಲ್ಜೆಫೋನಿನ ಎದುರಾಗಿ ಇಸ್ರಾಯೇಲರನ್ನು ಸಮೀಪಿಸಿದರು.