Exodus 15:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಮೋಶೆ ಮತ್ತು ಇಸ್ರೇಲರು ಯೆಹೋವನಿಗೆ ಈ ಗೀತೆಯನ್ನು ಹಾಡತೊಡಗಿದರು: “ನಾನು ಯೆಹೋವನಿಗೆ ಹಾಡುವೆನು. ಆತನು ಮಹಾಕಾರ್ಯಗಳನ್ನು ಮಾಡಿದ್ದಾನೆ. ಆತನು ಕುದುರೆಯನ್ನೂ ಸವಾರನನ್ನೂ ಸಮುದ್ರದೊಳಗೆ ಮುಳುಗಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಮೋಶೆಯೂ, ಇಸ್ರಾಯೇಲರೂ ಯೆಹೋವನನ್ನು ಸ್ತುತಿಸುವುದಕ್ಕಾಗಿ ಈ ಕೀರ್ತನೆಯನ್ನು ಹಾಡಿದರು: “ಯೆಹೋವನಿಗೆ ಸ್ತೋತ್ರ ಗಾನಮಾಡೋಣ; ಆತನು ಮಹಾಜಯಶಾಲಿಯಾದವನು. ಕುದುರೆಗಳನ್ನು ಮತ್ತು ರಾಹುತರನ್ನು ಸಮುದ್ರದಲ್ಲಿ ಕೆಡವಿ ನಾಶಮಾಡಿದ್ದಾನೆ.
Kannada BSI Bible 2016
ಆಗ ಮೋಶೆಯೂ ಇಸ್ರಾಯೇಲ್ ಮಕ್ಕಳೂ ಕರ್ತನಿಗೆ ಈ ಹಾಡನ್ನು ಹಾಡಿ ಹೇಳಿದ್ದೇನಂದರೆ--ನಾನು ಕರ್ತನಿಗೆ ಹಾಡುತ್ತೇನೆ; ಆತನು ಪ್ರಭಾವದಿಂದ ಜಯಶಾಲಿಯಾದನು; ಕುದುರೆ ಯನ್ನೂ (ಕುದುರೆಯ) ಸವಾರನನ್ನೂ ಸಮುದ್ರದಲ್ಲಿ ದೊಬ್ಬಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಮೋಶೆಯೂ ಇಸ್ರಾಯೇಲ್ಯರೂ ಯೆಹೋವನ ಸ್ತೋತ್ರಕ್ಕಾಗಿ ಈ ಕೀರ್ತನೆಯನ್ನು ಹಾಡಿದರು - ಯೆಹೋವನ ಸ್ತೋತ್ರವನ್ನು ಗಾನ ಮಾಡೋಣ; ಆತನು ಮಹಾ ಜಯಶಾಲಿಯಾದನು; ಕುದುರೆಗಳನ್ನೂ ರಾಹುತರನ್ನೂ ಸಮುದ್ರದಲ್ಲಿ ಕೆಡವಿನಾಶ ಮಾಡಿದ್ದಾನೆ.
Kannada Bible (KNCL) BSI 2016
ಆಗ ಮೋಶೆ ಮತ್ತು ಇಸ್ರಯೇಲರು ಸರ್ವೇಶ್ವರ ಸ್ವಾಮಿಗೆ ಸ್ತೋತ್ರವಾಗಿ ಈ ಕೀರ್ತನೆಯನ್ನು ಹಾಡಿದರು: “ಮಾಡೋಣ ಸರ್ವೇಶ್ವರನ ಗುಣಗಾನ ಮಹೋನ್ನತ ಆತ ಗಳಿಸಿದ ವಿಜಯ ಕುದುರೆಗಳನು ರಾಹುತರನು ಕಡಲಲ್ಲಿ ಕೆಡವಿ ನಾಶಮಾಡಿಹನು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಮೋಶೆ ಮತ್ತು ಇಸ್ರಾಯೇಲರು ಯೆಹೋವ ದೇವರಿಗೆ ಈ ಹಾಡನ್ನು ಹಾಡಿದರು: “ನಾನು ಯೆಹೋವ ದೇವರಿಗೆ ಹಾಡುತ್ತೇನೆ. ಏಕೆಂದರೆ ಅವರು ಪ್ರಭಾವದಿಂದ ಜಯಶಾಲಿಯಾದರು. ಕುದುರೆಗಳನ್ನೂ ರಾಹುತರನ್ನೂ ಸಮುದ್ರದಲ್ಲಿ ದಬ್ಬಿದ್ದಾರೆ.