Exodus 15:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ಬಿಡುಗಡೆ ಮಾಡಿದ ನಿನ್ನ ಜನರನ್ನು ಪ್ರೀತಿಯಿಂದ ನಡೆಸುವೆ. ನಿನ್ನ ಬಲದಿಂದ ನೀನು ಈ ಜನರನ್ನು ನಿನ್ನ ಪವಿತ್ರವಾದ ದೇಶಕ್ಕೆ ನಡಿಸುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಒಡಂಬಡಿಕೆಯ ನಂಬಿಗಸ್ತಿಕೆಯಲ್ಲಿ ನೀನು ನಿನ್ನ ಪ್ರಜೆಯನ್ನು ಬಿಡುಗಡೆ ಮಾಡಿರುವೆ. ನಿನ್ನ ಶಕ್ತಿಯಿಂದ ಅವರನ್ನು ನೀನು ವಾಸಮಾಡುವ ಪರಿಶುದ್ಧ ನಿವಾಸಕ್ಕೆ ನಡೆಸಿರುವೆ.
Kannada BSI Bible 2016
ನೀನು ವಿಮೋಚಿ ಸಿದ ಜನರನ್ನು ಕರುಣೆಯಿಂದ ನಡಿಸಿದಿ; ನೀನು ಅವ ರನ್ನು ನಿನ್ನ ಬಲದಿಂದ ನಿನ್ನ ಪರಿಶುದ್ಧ ನಿವಾಸಕ್ಕೆ ನಡಿಸಿದಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಬಿಡುಗಡೆ ಮಾಡಿದ ಪ್ರಜೆಯನ್ನೋ ಪ್ರೀತಿಯಿಂದ ನಡಿಸಿಕೊಂಡು ನಿನ್ನ ಪರಿಶುದ್ಧ ನಿವಾಸಸ್ಥಾನದ ತನಕ ನಿನ್ನ ಶಕ್ತಿಯಿಂದ ಬರಮಾಡಿದಿ.
Kannada Bible (KNCL) BSI 2016
ನೀ ಬಿಡುಗಡೆ ಮಾಡಿದ ಜನರನ್ನು ನಡೆಸಿಕೊಂಡೆ ಪ್ರೀತಿಯಿಂದ ನಿನ್ನ ಶ್ರೀನಿವಾಸದ ತನಕ ಅವರನ್ನು ಬರಮಾಡಿದೆ ಶಕ್ತಿಯಿಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ವಿಮೋಚಿಸಿದ ಜನರನ್ನು ನೀವು ನಿಮ್ಮ ಪ್ರೀತಿಯಿಂದ ನಡೆಸಿದ್ದೀರಿ. ನೀವು ಅವರನ್ನು ನಿಮ್ಮ ಬಲದಿಂದ ನಿಮ್ಮ ಪರಿಶುದ್ಧ ನಿವಾಸಕ್ಕೆ ನಡೆಸಿದ್ದೀರಿ.