Exodus 15:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಫರೋಹನ ಕುದುರೆಗಳು, ಸವಾರರು, ರಥಗಳು ಸಮುದ್ರದೊಳಕ್ಕೆ ಹೋದಾಗ ಸಮುದ್ರದ ನೀರು ಅವರನ್ನು ಆವರಿಸಿಕೊಳ್ಳುವಂತೆ ಯೆಹೋವನು ಮಾಡಿದನು. ಇಸ್ರೇಲರಾದರೊ ಸಮುದ್ರದೊಳಗಿನ ಒಣನೆಲದಲ್ಲಿ ಸಮುದ್ರವನ್ನು ದಾಟಿಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಫರೋಹನ ಕುದುರೆಗಳು, ರಥಗಳೂ, ರಾಹುತರೂ ಸಮುದ್ರದೊಳಗೆ ಬಂದಾಗ ಯೆಹೋವನು ಸಮುದ್ರದ ನೀರನ್ನು ಅವರ ಮೇಲೆ ತಿರುಗಿ ಬರಮಾಡಿ ಮುಳುಗಿಸಿಬಿಟ್ಟನು. ಆದರೆ ಇಸ್ರಾಯೇಲರಾದರೋ ಸಮುದ್ರದ ಮಧ್ಯದಲ್ಲಿನ ಒಣ ನೆಲದ ಮೇಲೆ ದಾಟಿ ಹೋದರು.
Kannada BSI Bible 2016
ಫರೋ ಹನ ಕುದುರೆಗಳು ಅವನ ರಥಗಳ ಸಂಗಡಲೂ ಸವಾರರ ಸಂಗಡಲೂ ಸಮುದ್ರದೊಳಗೆ ಬಂದಾಗ ಕರ್ತನು ಸಮುದ್ರದ ನೀರನ್ನು ಅವರ ಮೇಲೆ ತಿರಿಗಿ ಬರ ಮಾಡಿದನು; ಆದರೆ ಇಸ್ರಾಯೇಲ್‌ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣನೆಲದ ಮೇಲೆ ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
[ಈ ಜಯಗೀತಕ್ಕೆ ಕಾರಣವೇನಂದರೆ -] ಫರೋಹನ ಕುದುರೆಗಳೂ ರಥಗಳೂ ರಾಹುತರೂ ಸಮುದ್ರದಲ್ಲಿ ಹೊಕ್ಕು ನಡೆಯಲು ಯೆಹೋವನು ಸಮುದ್ರದ ನೀರನ್ನು ಅವರ ಮೇಲೆ ತಿರಿಗಿ ಬರಮಾಡಿ ಮುಳುಗಿಸಿಬಿಟ್ಟನು; ಇಸ್ರಾಯೇಲ್ಯರಾದರೋ ಸಮುದ್ರದ ಮಧ್ಯದೊಳಗೆ ಒಣನೆಲದಲ್ಲಿ ನಡೆದುಹೋದರು.
Kannada Bible (KNCL) BSI 2016
ಫರೋಹನ ಕುದುರೆಗಳು, ರಥಗಳು ಹಾಗು ರಾಹುತರು ಸಮುದ್ರವನ್ನು ಹೊಕ್ಕು ನಡೆಯಲಾರಂಭಿಸಿದಾಗ ಸರ್ವೇಶ್ವರ ಸ್ವಾಮಿ ಸಮುದ್ರದ ನೀರನ್ನು ಮೊದಲಿನಂತೆ ಬರಮಾಡಿ ಅವರನ್ನು ಮುಳುಗಿಸಿಬಿಟ್ಟರು. ಇಸ್ರಯೇಲರಾದರೋ, ಸಮುದ್ರದ ನಡುವೆ ಒಣನೆಲದಲ್ಲಿ ನಡೆದು ಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಫರೋಹನ ಕುದುರೆಗಳು ಅವನ ರಥಗಳ ಮತ್ತು ಸವಾರರ ಸಂಗಡ ಸಮುದ್ರದೊಳಗೆ ಬಂದಾಗ, ಯೆಹೋವ ದೇವರು ಸಮುದ್ರದ ನೀರನ್ನು ಅವರ ಮೇಲೆ ತಿರುಗಿ ಬರಮಾಡಿದರು. ಆದರೆ ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿನ ಒಣನೆಲದ ಮೇಲೆ ದಾಟಿಹೋದರು.