Exodus 15:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನೇ ನನ್ನ ಬಲ, ಆತನು ನನ್ನನ್ನು ರಕ್ಷಿಸುತ್ತಾನೆ. ನನ್ನ ಬಲವೂ ಕೀರ್ತನೆಯೂ ಯಾಹುವೇ; ಆತನಿಂದ ನಮಗೆ ರಕ್ಷಣೆ ಉಂಟಾಯಿತು. ಯೆಹೋವನು ನನ್ನ ದೇವರು. ಮತ್ತು ನಾನು ಆತನನ್ನು ಸ್ತುತಿಸುತ್ತೇನೆ. ಯೆಹೋವನೇ ನಮ್ಮ ಪೂರ್ವಿಕರ ದೇವರು. ನಾನು ಆತನನ್ನು ಸನ್ಮಾನಿಸುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಬಲವೂ, ಕೀರ್ತನೆಯೂ ಯಾಹುವೇ. ಆತನಿಂದ ನನಗೆ ರಕ್ಷಣೆ ಉಂಟಾಯಿತು. ನಮ್ಮ ದೇವರು ಆತನೇ, ಆತನನ್ನು ಸ್ತುತಿಸುವೆನು, ನಮ್ಮ ಪೂರ್ವಿಕರ ದೇವರು ಆತನೇ, ಆತನ ಮಹಿಮೆಯನ್ನು ಪ್ರಖ್ಯಾತಿಪಡಿಸುವೆವು.
Kannada BSI Bible 2016
ಕರ್ತನು ನನ್ನ ಬಲವೂ ಕೀರ್ತನೆಯೂ ಆಗಿದ್ದಾನೆ, ಆತನು ನನ್ನ ರಕ್ಷಣೆಯಾದನು, ಆತನು ನನ್ನ ದೇವರು, ಆತನಿಗಾಗಿ ನಾನು ಒಂದು ನಿವಾಸವನ್ನು ಸಿದ್ಧಮಾಡುವೆನು. ಆತನು ನನ್ನ ತಂದೆಯ ದೇವರು, ನಾನು ಆತನನ್ನು ಘನಪಡಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಬಲವೂ ಕೀರ್ತನೆಯೂ ಯಾಹುವೇ, ಆತನಿಂದ ನನಗೆ ರಕ್ಷಣೆಯುಂಟಾಯಿತು. ನಮ್ಮ ದೇವರು ಆತನೇ, ಆತನನ್ನು ವರ್ಣಿಸುವೆವು; ನಮ್ಮ ಪಿತೃಗಳ ದೇವರು ಆತನೇ, ಆತನ ಮಹಿಮೆಯನ್ನು ಪ್ರಖ್ಯಾತಿಪಡಿಸುವೆವು.
Kannada Bible (KNCL) BSI 2016
ಸರ್ವೇಶ್ವರನೇ ನನ್ನ ಶಕ್ತಿ, ನನ್ನ ಗೀತೆ! ಆತನಿಂದಲೇ ನನಗೆ ದೊರಕಿತು ರಕ್ಷಣೆ. ಆತನನ್ನು ವರ್ಣಿಸುವೆನು, ಆತನೆನ್ನ ದೇವನು ಆತನನ್ನು ಸ್ತುತಿಸುವೆನು, ಆತನೆನ್ನ ಪಿತೃಗಳ ದೇವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯೆಹೋವ ದೇವರು ನನ್ನ ಬಲವೂ ಕೀರ್ತನೆಯೂ ಆಗಿದ್ದಾರೆ; ಅವರು ನನ್ನ ರಕ್ಷಣೆಯಾದರು; ಅವರು ನನ್ನ ದೇವರು, ಅವರನ್ನು ಕೊಂಡಾಡುವೆನು; ಅವರು ನನ್ನ ತಂದೆಯ ದೇವರು, ನಾನು ಅವರನ್ನು ಘನಪಡಿಸುವೆನು.