Exodus 15:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮಿರ್ಯಾಮಳು ಅವರ ಹಾಡಿಗೆ ಹೀಗೆ ಪಲ್ಲವಿ ಹಾಡಿದಳು: “ಯೆಹೋವನಿಗೆ ಗಾನಮಾಡಿರಿ; ಆತನು ಮಹಾಜಯಶಾಲಿಯಾದನು. ಕುದುರೆಗಳನ್ನೂ ರಾಹುತರನ್ನೂ ಸಮುದ್ರದೊಳಗೆ ಮುಳುಗಿಸಿ ನಾಶಮಾಡಿದನು…”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಿರ್ಯಾಮಳು ಅವರಿಗೆ ಹೀಗೆ ಹಾಡಿದಳು: “ಯೆಹೋವನಿಗೆ ಕೀರ್ತನೆ ಹಾಡಿರಿ, ಆತನು ಮಹೋನ್ನತನಾದ ದೇವರಾಗಿದ್ದಾನೆ. ಕುದುರೆಗಳನ್ನೂ, ರಾಹುತರನ್ನೂ ಸಮುದ್ರದಲ್ಲಿ ಮುಳುಗಿಸಿ ನಾಶಮಾಡಿದನು.”
Kannada BSI Bible 2016
ಮಿರ್ಯಾಮಳು ಅವರಿಗೆ ಕೊಟ್ಟ ಉತ್ತರವೇನಂದರೆ--ನೀವು ಕರ್ತನಿಗೆ ಹಾಡಿರಿ, ಆತನು ಮಹಿಮೆಯಿಂದ ಜಯಿಸಿದ್ದಾನೆ; ಕುದುರೆಯನ್ನು ಸವಾರ ನನ್ನು ಸಮುದ್ರದಲ್ಲಿ ಹಾಕಿದ್ದಾನೆ ಎಂಬದು.
Kannada BSI JV (ಕನ್ನಡ ಸತ್ಯವೇದವು J.V. (BSI))
ವಿುರ್ಯಾಮಳು ಅವರ ಹಾಡಿಗೆ ಹೀಗೆ ಪಲ್ಲವಿ ಹಾಡಿದಳು- ಯೆಹೋವನನ್ನು ಗಾನಮಾಡಿರಿ; ಆತನು ಮಹಾಜಯಶಾಲಿಯಾದನು; ಕುದುರೆಗಳನ್ನೂ ರಾಹುತರನ್ನೂ ಸಮುದ್ರದಲ್ಲಿ ಕೆಡವಿ ನಾಶಮಾಡಿದ್ದಾನೆ.
Kannada Bible (KNCL) BSI 2016
ಮಿರ್ಯಾಮಳು ಅವರ ಹಾಡಿಗೆ ಈ ಪಲ್ಲವಿಯನ್ನು ಕೂಡಿಸಿದಳು: ಮಾಡಿರಿ ಸರ್ವೇಶ್ವರನ ಗುಣಗಾನ ಮಹೋನ್ನತ ಆತ ಗಳಿಸಿದ ವಿಜಯ ಕಡಲಲ್ಲಿ ಕೆಡವಿ ನಾಶಮಾಡಿಹನು ಕುದುರೆಗಳನು, ರಾಹುತರನು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಿರ್ಯಾಮಳು ಅವರಿಗೆ ಹೀಗೆ ಹಾಡಿದಳು: “ಯೆಹೋವ ದೇವರಿಗೆ ನೀವು ಹಾಡಿರಿ, ಅವರು ಮಹೋನ್ನತದಲ್ಲಿದ್ದಾರೆ; ಕುದುರೆಯನ್ನೂ ಸವಾರರನ್ನೂ ಸಮುದ್ರದಲ್ಲಿ ಮುಣುಗಿಸಿಬಿಟ್ಟರು.”