Exodus 15:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೋಶೆಯು ಇಸ್ರೇಲರನ್ನು ಕೆಂಪುಸಮುದ್ರದಿಂದ ಮುನ್ನಡೆಸಿದನು. ಅವರು ಶೂರಿನ ಅರಣ್ಯದೊಳಗೆ ಹೋದರು. ಅವರು ಅರಣ್ಯದಲ್ಲಿ ಮೂರು ದಿನಗಳವರೆಗೆ ಪ್ರಯಾಣ ಮಾಡಿದರು. ಜನರಿಗೆ ಎಲ್ಲಿಯೂ ನೀರು ಸಿಕ್ಕಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆನಂತರ ಮೋಶೆಯು ಇಸ್ರಾಯೇಲರನ್ನು ಕೆಂಪುಸಮುದ್ರದ ಮೂಲಕವಾಗಿ ನಡೆಸಿದನು. ಅವರು ಶೂರ್ ಮರುಭೂಮಿಯಲ್ಲಿ ಮೂರು ದಿನಗಳು ನೀರಿಲ್ಲದೆ ಪ್ರಯಾಣ ಮಾಡಿದರು.
Kannada BSI Bible 2016
ಹೀಗೆ ಮೋಶೆಯು ಇಸ್ರಾಯೇಲ್ಯರನ್ನು ಕೆಂಪು ಸಮುದ್ರದಿಂದ ಬರಮಾಡಿದನು; ಅವರು ಶೂರಿನ ಅರಣ್ಯದೊಳಗೆ ಹೋದರು; ಅವರು ಅರಣ್ಯದಲ್ಲಿ ಮೂರು ದಿನ ಪ್ರಯಾಣ ಮಾಡಿದಾಗ್ಯೂ ನೀರನ್ನು ಕಂಡುಕೊಳ್ಳಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಳಿಕ ಮೋಶೆಯು ಇಸ್ರಾಯೇಲ್ಯರನ್ನು ಕೆಂಪು ಸಮುದ್ರದ ಬಳಿಯಿಂದ ಪ್ರಯಾಣ ಮಾಡಿಸಲು ಅವರು ಶೂರಿನ ಅರಣ್ಯದೊಳಗೆ ಮೂರು ದಿನ ನಡೆದು ಹೋದರು. ಅಲ್ಲಿ ಅವರಿಗೆ ನೀರು ಸಿಕ್ಕಲೇ ಇಲ್ಲ.
Kannada Bible (KNCL) BSI 2016
ಬಳಿಕ ಮೋಶೆ ಇಸ್ರಯೇಲರನ್ನು ಕೆಂಪು ಸಮುದ್ರದ ಬಳಿಯಿಂದ ಕರೆದುಕೊಂಡು ಹೋದನು. ಅವರು ಶೂರ್ ಮರುಭೂಮಿಯಲ್ಲಿ ಮೂರು ದಿನ ಪ್ರಯಾಣ ಮಾಡಬೇಕಾಯಿತು. ಅಲ್ಲಿ ಅವರಿಗೆ ನೀರು ಸಿಕ್ಕಲೇ ಇಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಮೇಲೆ ಮೋಶೆಯು ಇಸ್ರಾಯೇಲರನ್ನು ಕೆಂಪು ಸಮುದ್ರದಿಂದ ನಡೆಸಿದನು. ಅವರು ಶೂರಿನ ಮರುಭೂಮಿಯೊಳಗೆ ಹೋದರು. ಅವರು ಮರುಭೂಮಿಯಲ್ಲಿ ಮೂರು ದಿನಗಳು ಪ್ರಯಾಣಮಾಡಿದರೂ ನೀರನ್ನು ಕಂಡುಕೊಳ್ಳಲಿಲ್ಲ.