Exodus 15:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಬಳಿಕ ಅವರು ಮಾರಾ ಎಂಬ ಸ್ಥಳವನ್ನು ತಲುಪಿದರು. ಅಲ್ಲಿ ನೀರಿತ್ತು. ಆದರೆ ಅವರು ಆ ನೀರನ್ನು ಕುಡಿಯಲಾಗಲಿಲ್ಲ. ಯಾಕೆಂದರೆ ಅದು ಬಹು ಕಹಿಯಾಗಿತ್ತು. (ಆದಕಾರಣವೇ ಆ ಸ್ಥಳಕ್ಕೆ ‘ಮಾರಾ’ ಎಂಬುದಾಗಿ ಹೆಸರು ಕೊಡಲ್ಪಟ್ಟಿತ್ತು.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಅವರು ಮಾರಾ ಎಂಬ ಸ್ಥಳಕ್ಕೆ ಬಂದರು. ಆದರೆ ಆ ಸ್ಥಳದ ನೀರು ಕಹಿಯಾಗಿದ್ದರಿಂದ ಅವರಿಗೆ ಅದನ್ನು ಕುಡಿಯುವುದಕ್ಕೆ ಆಗದೆ ಹೋಯಿತು. ಆದ್ದರಿಂದಲೇ ಆ ಸ್ಥಳಕ್ಕೆ ಮಾರಾ ಎಂದು ಹೆಸರಾಯಿತು.
Kannada BSI Bible 2016
ಅವರು ಮಾರಾಗೆ ಬಂದ ಮೇಲೆ ಮಾರಾದ ನೀರನ್ನು ಕುಡಿಯಲಾರದೆ ಇದ್ದರು; ಯಾಕಂದರೆ ಅದು ಕಹಿಯಾಗಿತ್ತು. ಆದಕಾರಣ ಅದರ ಹೆಸರು ಮಾರಾ ಎಂದು ಕರೆಯಲ್ಪಟ್ಟಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಮಾರಾ ಎಂಬ ಸ್ಥಳವನ್ನು ಸೇರಿದರು; ಆದರೆ ಆ ಸ್ಥಳದ ನೀರು ಕಹಿಯಾಗಿದ್ದದರಿಂದ ಅವರಿಗೆ ಅದನ್ನು ಕುಡಿಯುವದಕ್ಕಾಗದೆ ಹೋಯಿತು. ಅದರಿಂದಲೇ ಆ ಸ್ಥಳಕ್ಕೆ ಮಾರಾ ಎಂದು ಹೆಸರಾಯಿತು.
Kannada Bible (KNCL) BSI 2016
ತರುವಾಯ ‘ಮಾರಾ’ ಎಂಬ ಸ್ಥಳವನ್ನು ತಲುಪಿದರು. ಅಲ್ಲಿ ನೀರು ಸಿಕ್ಕಿತಾದರೂ ಅದು ಕಹಿಯಾಗಿತ್ತು. ಅದನ್ನು ಕುಡಿಯುವುದಕ್ಕೆ ಆಗದೆ ಹೋಯಿತು. ಆದ್ದರಿಂದ ಆ ಸ್ಥಳಕ್ಕೆ ‘ಮಾರಾ’ ಎಂದು ಹೆಸರಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಮಾರಾ ಎಂಬಲ್ಲಿಗೆ ಬಂದ ಮೇಲೆ ಅಲ್ಲಿಯ ನೀರನ್ನು ಕುಡಿಯಲಾರದೆ ಇದ್ದರು; ಅದು ಕಹಿಯಾಗಿತ್ತು. ಆದಕಾರಣ ಅದರ ಹೆಸರು “ಮಾರಾ” ಎಂದು ಕರೆಯಲಾಯಿತು.