Exodus 15:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಜನರು ಏಲೀಮಿಗೆ ಪ್ರಯಾಣ ಮಾಡಿದರು. ಏಲೀಮಿನಲ್ಲಿ ನೀರಿನ ಹನ್ನೆರಡು ಬುಗ್ಗೆಗಳಿದ್ದವು; ಅಲ್ಲಿ ಎಪ್ಪತ್ತು ಖರ್ಜೂರದ ಮರಗಳಿದ್ದವು. ಆದ್ದರಿಂದ ಅವರು ನೀರಿನ ಹತ್ತಿರ ತಮ್ಮ ಪಾಳೆಯ ಹಾಕಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ನಂತರ ಅವರು ಏಲೀಮಿಗೆ ಬಂದರು. ಅಲ್ಲಿ ಹನ್ನೆರಡು ನೀರಿನ ಬುಗ್ಗೆಗಳೂ, ಎಪ್ಪತ್ತು ಖರ್ಜೂರದ ಮರಗಳೂ ಇದ್ದವು. ಆ ನೀರಿನ ಬಳಿಯಲ್ಲಿ ಅವರು ಇಳಿದು ಕೊಂಡರು.
Kannada BSI Bible 2016
ತರುವಾಯ ಅವರು ಹನ್ನೆರಡು ನೀರಿನ ಬಾವಿಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದ ಏಲೀಮಿಗೆ ಬಂದರು. ಅವರು ಆ ನೀರುಗಳ ಬಳಿಯಲ್ಲಿ ಇಳುಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಅವರು ಏಲೀವಿುಗೆ ಬಂದರು. ಅಲ್ಲಿ ಹನ್ನೆರಡು ನೀರಿನ ಒರತೆಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದದರಿಂದ ಆ ನೀರಿನ ಬಳಿಯಲ್ಲಿ ಇಳುಕೊಂಡರು.
Kannada Bible (KNCL) BSI 2016
ಅಲ್ಲಿಂದ ಆ ಜನರು ಏಲೀಮಿಗೆ ಬಂದರು. ಅಲ್ಲಿ ಹನ್ನೆರಡು ನೀರಿನ ಒರತೆಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದವು. ಆದ್ದರಿಂದ ಆ ನೀರಿನ ಬಳಿಯಲ್ಲೇ ಇಳಿದುಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ಇಸ್ರಾಯೇಲರು ಏಲೀಮಿಗೆ ಬಂದರು. ಅಲ್ಲಿ ಹನ್ನೆರಡು ನೀರಿನ ಬಾವಿಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದವು. ಅವರು ಆ ನೀರಿನ ಬಳಿಯಲ್ಲಿ ಇಳಿದುಕೊಂಡರು.