Exodus 15:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಿನ್ನ ಭುಜಬಲವು ಎಷ್ಟೋ ಶಕ್ತಿಯುಳ್ಳದ್ದಾಗಿದೆ. ಯೆಹೋವನೇ, ನಿನ್ನ ಭುಜಬಲವು ವೈರಿಯನ್ನು ನುಚ್ಚುನೂರು ಮಾಡಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನೇ, ನಿನ್ನ ಬಲಗೈಯಲ್ಲಿರುವ ಶಕ್ತಿ ಎಷ್ಟೋ ಮಹಿಮೆಯುಳ್ಳದ್ದಾಗಿದೆ. ಯೆಹೋವನೇ, ನಿನ್ನ ಬಲಗೈ ಶತ್ರುಗಳನ್ನು ಪುಡಿಪುಡಿಮಾಡಿಬಿಡುತ್ತದೆ.
Kannada BSI Bible 2016
ಓ ಕರ್ತನೇ, ನಿನ್ನ ಬಲಗೈ ಶಕ್ತಿಯಲ್ಲಿ ಮಹಿಮೆಯುಳ್ಳ ದ್ದಾಗಿದೆ. ಓ ಕರ್ತನೇ, ನಿನ್ನ ಬಲಗೈ ಶತ್ರುವನ್ನು ಜಜ್ಜಿ ಪುಡಿಮಾಡಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೇ, ನಿನ್ನ ಭುಜಬಲವು ಎಷ್ಟೋ ಘನವಾದದ್ದು; ಯೆಹೋವನೇ, ನಿನ್ನ ಭುಜಬಲವು ನಿನ್ನ ಶತ್ರುಗಳನ್ನು ಪುಡಿಪುಡಿ ಮಾಡುತ್ತದೆ.
Kannada Bible (KNCL) BSI 2016
ಹೇ ಸರ್ವೇಶ್ವರಾ, ನಿನ್ನ ಭುಜಬಲ ಶಕ್ತಿಯುತ! ಪುಡಿ ಪುಡಿ ಮಾಡಿತು ನಿನ್ನ ಶತ್ರುಗಳನು ಆ ಬಾಹುಬಲ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರೇ, ನಿಮ್ಮ ಬಲಗೈ ಶಕ್ತಿಯಲ್ಲಿ ಮಹಿಮೆಯುಳ್ಳದ್ದಾಗಿದೆ; ಯೆಹೋವ ದೇವರೇ, ನಿಮ್ಮ ಬಲಗೈ ಶತ್ರುವನ್ನು ಜಜ್ಜಿ ಪುಡಿ ಮಾಡಿತು.