Exodus 15:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ಅತ್ಯಧಿಕ ಮಹತ್ವವುಳ್ಳವನಾಗಿ, ನನಗೆದುರು ನಿಲ್ಲುವವರನ್ನು ನಾಶಗೊಳಿಸಿದೆ. ಬೆಂಕಿಯು ಹುಲ್ಲನ್ನು ಸುಡುವಂತೆ ನಿನ್ನ ಕೋಪವು ಅವರನ್ನು ನಾಶಮಾಡಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಅತ್ಯಧಿಕ ಮಹತ್ವವುಳ್ಳವನಾಗಿ ನಿನ್ನೆದುರಿಗೆ ನಿಲ್ಲುವವರನ್ನು ಕೆಡವಿಬಿಟ್ಟಿರುವೆ. ನಿನ್ನ ಕೋಪಾಗ್ನಿಯು ಹೊರಟು ಅವರನ್ನು ಒಣಗಿದ ಹುಲ್ಲನ್ನೋ ಎಂಬಂತೆ ಸುಟ್ಟು ಭಸ್ಮಮಾಡಿ ಬಿಟ್ಟಿದೆ.
Kannada BSI Bible 2016
ನಿನ್ನ ಮಹತ್ತಾದ ಘನತೆಯಲ್ಲಿ ನಿನಗೆ ವಿರೋಧವಾಗಿ ಎದ್ದವರನ್ನು ಕೆಡವಿ ಬಿಟ್ಟಿರುವಿ. ನಿನ್ನ ರೌದ್ರವು ಹೊರಟು ಅವರನ್ನು ಹುಲ್ಲಿನಂತೆ ದಹಿಸಿಬಿಟ್ಟಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಅತ್ಯಧಿಕ ಮಹತ್ವವುಳ್ಳವನಾಗಿ ನಿನಗೆದುರಾಗಿ ನಿಲ್ಲುವವರನ್ನು ಕೆಡವಿಬಿಡುತ್ತೀ, ನಿನ್ನ ಕೋಪಾಗ್ನಿಯು ಹೊರಟು ಅವರನ್ನು ಒಣಗಿದ ಹುಲ್ಲನ್ನೋ ಎಂಬಂತೆ ಭಸ್ಮ ಮಾಡುತ್ತದೆ.
Kannada Bible (KNCL) BSI 2016
ನಿನ್ನೆದುರಾಳಿಗಳನು ಕೆಡವಿಬಿಡುತಿ ಮಹಾ ತೇಜಸ್ವಿಯಾಗಿ ಒಣಹುಲ್ಲಂತೆ ಭಸ್ಮಮಾಡುತಿ ಅವರನು ಕೋಪಾಗ್ನಿಯಾಗಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಿಮ್ಮ ಮಹತ್ತಾದ ಘನತೆಯಲ್ಲಿ ನಿಮಗೆ ವಿರೋಧವಾಗಿ ಎದ್ದವರನ್ನು ಕೆಡವಿಬಿಟ್ಟಿರುವಿರಿ. ನಿಮ್ಮ ಕೋಪವು ಬೆಂಕಿಯಂತೆ ಕಾರಿದೆ; ಅದು ಅವರನ್ನು ಕೋಲಿನಂತೆ ದಹಿಸಿತು.