Exodus 15:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ಊದಿದ ಮಹಾಗಾಳಿಯಿಂದ ನೀರು ಒತ್ತಟ್ಟಿಗೆ ಸೇರಿತು. ವೇಗವಾಗಿ ಹರಿಯುವ ನೀರು ಗಟ್ಟಿಯಾದ ಗೋಡೆಯಾಯಿತು. ಸಾಗರಗರ್ಭದೊಳಗಿನ ಜಲವು ಗಟ್ಟಿಯಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಮೂಗಿನ ಶ್ವಾಸದಿಂದ ಸಮುದ್ರದ ನೀರು ಒಟ್ಟುಗೂಡಿದವು; ಪ್ರವಾಹವು ಗೋಡೆಯೋಪಾದಿಯಲ್ಲಿ ನಿಂತುಕೊಂಡಿತು; ಸಾಗರದಾಳದೊಳಗಿನ ನೀರು ಗಟ್ಟಿಯಾಯಿತು.
Kannada BSI Bible 2016
ನಿನ್ನ ಮೂಗಿನ ಬಿರುಸಾದ ಗಾಳಿ ಯಿಂದ ನೀರುಗಳು ಒಟ್ಟುಗೂಡಿದವು. ಪ್ರವಾಹಗಳು ರಾಶಿಯಂತೆ ನಿಂತವು; ಸಮುದ್ರದ ಅಗಾಧಗಳ ನೀರು ಗಟ್ಟಿಯಾದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಸಿಟ್ಟಿನಿಂದ ಮುಸುಗರೆದಾಗ ಸಮುದ್ರದ ನೀರು ಒಡ್ಡಿನಂತಾಯಿತು. ಪ್ರವಾಹವು ಗೋಡೆಯೋಪಾದಿಯಲ್ಲಿ ನಿಂತುಕೊಂಡಿತು. ಸಾಗರ ಗರ್ಭದೊಳಗಣ ಜಲವು ಗಟ್ಟಿಯಾಯಿತು.
Kannada Bible (KNCL) BSI 2016
ಸಿಟ್ಟಿನಿಂದ ನೀ ಮುಸುಗೆರೆದಾಗಲೆ ಸಮುದ್ರವಾಯಿತು ನೀರೊಡ್ಡಿನಂತೆ ಪ್ರವಾಹ ನಿಂತಿತು ಗೋಡೆಯಂತೆ ಸಾಗರ (ಗರ್ಭ) ದೊಳಗಿನ ಜಲ ಗಟ್ಟಿಯಾಯಿತು ನೆಲದಂತೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಬೀಸಿದ ಬಿರುಸಾದ ಗಾಳಿಯಿಂದ ನೀರು ಒಟ್ಟುಗೂಡಿದವು. ಪ್ರವಾಹಗಳು ರಾಶಿಯಂತೆ ನಿಂತವು. ಜಲರಾಶಿಗಳು ಸಮುದ್ರದ ಮಧ್ಯದಲ್ಲಿ ಗಟ್ಟಿಯಾದವು.