Exodus 15:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಾವು ಅವರನ್ನು ಬೆನ್ನಟ್ಟಿ ಹಿಡಿಯುವೆವು; ನಾವು ಅವರ ಸಂಪತ್ತನ್ನೆಲ್ಲಾ ತೆಗೆದುಕೊಳ್ಳುವೆವು. ನಾವು ಖಡ್ಗದಿಂದ ಅವರನ್ನು ಸಂಹರಿಸುವೆವು. ನಮ್ಮ ಭುಜಬಲದಿಂದ ಅವರ ಸ್ವತ್ತುಗಳನ್ನೆಲ್ಲಾ ವಶಪಡಿಸಿಕೊಳ್ಳುವೆವು’ ಎಂದುಕೊಂಡರು ವೈರಿಗಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶತ್ರುವು, ‘ನಾವು ಇವರನ್ನು ಹಿಂದಟ್ಟಿ ಹಿಡಿಯುವೆವು, ಅವರ ಸೊತ್ತನ್ನು ಅಪಹರಿಸಿ ಹಂಚಿಕೊಳ್ಳುವೆವು; ಅವರಲ್ಲಿ ನಮ್ಮ ಬಯಕೆಯನ್ನು ತೀರಿಸಿಕೊಳ್ಳುವೆವು. ನಾವು ಖಡ್ಗವನ್ನು ಹಿಡಿದು; ಶಕ್ತಿಯಿಂದ ಅವರನ್ನು ಸಂಹಾರಮಾಡುವೆವು’ ಎಂಬುದಾಗಿ ಮಾತನಾಡಿಕೊಳ್ಳುತ್ತಿದ್ದರು.
Kannada BSI Bible 2016
ಶತ್ರುವು--ನಾನು ಹಿಂದಟ್ಟಿ, ಹಿಡಿ ಯುವೆನು, ಕೊಳ್ಳೆಯನ್ನು ಹಂಚಿಕೊಳ್ಳುವೆನು, ನನ್ನ ಆಶೆಗಳು ಅವರಿಂದ ತೃಪ್ತಿಹೊಂದುವವು. ನಾನು ನನ್ನ ಖಡ್ಗವನ್ನು ಹಿರಿಯುವೆನು, ನನ್ನ ಕೈ ಅವರನ್ನು ಸಂಹಾರ ಮಾಡುವದು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ಇವರನ್ನು ಹಿಂದಟ್ಟಿ ಹಿಡಿಯುವೆವು, ಅವರ ಸೊತ್ತನ್ನು ಅಪಹರಿಸಿ ಹಂಚಿಕೊಳ್ಳುವೆವು, ಅವರಲ್ಲಿ ನಮ್ಮ ಕೋರಿಕೆಯನ್ನು ತೀರಿಸಿಕೊಳ್ಳುವೆವು, ನಾವು ಕತ್ತಿಯನ್ನು ಹಿರಿದು ಭುಜಬಲದಿಂದ ಅವರನ್ನು ಸಂಹಾರ ಮಾಡುವೆವು ಎಂಬದಾಗಿ ನಮ್ಮ ಶತ್ರುಗಳು ಮಾತಾಡಿಕೊಳ್ಳುತ್ತಿದ್ದರು.
Kannada Bible (KNCL) BSI 2016
ನಮ್ಮ ಶತ್ರುಗಳು ಮಾತಾಡಿಕೊಂಡರು ಇಂತೆಂದು: ‘ಹಿಂದಟ್ಟಿ ಹಿಡಿಯುವೆವು ಅವರನು ಅಪಹರಿಸಿಕೊಳ್ವೆವು ಅವರ ಸೊತ್ತನು ತೀರಿಸಿಕೊಳ್ವೆವು ಅವರಲ್ಲಿ ನಮ್ಮ ಬಯಕೆಯನು ಶಕ್ತಿಯಿಂದ ಸಂಹರಿಸುವೆವು ಅವರನು ಕತ್ತಿ ಹಿಡಿದು.’
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಶತ್ರುವು ಹೆಮ್ಮೆಯಿಂದ ಹೀಗೆ ಮಾತನಾಡಿಕೊಳ್ಳುತ್ತಿದ್ದರು, ‘ನಾನು ಹಿಂದಟ್ಟುವೆನು, ಅವರನ್ನು ಹಿಡಿಯುವೆನು, ನಾನು ಅವರ ಕೊಳ್ಳೆಯನ್ನು ಹಂಚುವೆನು; ನನ್ನ ಆಶೆಗಳು ಅವರಿಂದ ತೃಪ್ತಿ ಹೊಂದುವುವು; ನಾನು ನನ್ನ ಖಡ್ಗವನ್ನು ಹಿರಿಯುವೆನು; ನನ್ನ ಕೈ ಅವರನ್ನು ಸಂಹಾರ ಮಾಡುವುದು.’