Exodus 16:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಅವರು ಏಲೀಮಿನಿಂದ ಪ್ರಯಾಣಮಾಡಿ ಸಿನ್ ಅರಣ್ಯಕ್ಕೆ ಬಂದರು. ಈ ಸ್ಥಳವು ಏಲೀಮಿನ ಮತ್ತು ಸೀನಾಯ್ ಬೆಟ್ಟದ ನಡುವೆ ಇತ್ತು. ಈಜಿಪ್ಟನ್ನು ಬಿಟ್ಟ ನಂತರ ಎರಡನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಅವರು ಈ ಸ್ಥಳಕ್ಕೆ ಬಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರ ಸಮೂಹವೆಲ್ಲಾ ಏಲೀಮಿನಿಂದ ಪ್ರಯಾಣ ಮಾಡಿ ಅವರು ಐಗುಪ್ತ ದೇಶದಿಂದ ಹೊರಟ ಎರಡನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಎಲೀಮಿಗೂ ಸೀನಾಯಿ ಬೆಟ್ಟಕ್ಕೂ ನಡುವೆಯಿರುವ ಸೀನ್ ಎಂಬ ಮರುಭೂಮಿಗೆ ಬಂದರು.
Kannada BSI Bible 2016
ತರುವಾಯ ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಏಲೀಮಿನಿಂದ ಪ್ರಯಾಣ ಮಾಡಿ ಅವರು ಐಗುಪ್ತದೇಶದಿಂದ ಹೊರಟ ಎರಡ ನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಏಲೀಮಿಗೂ ಸೀನಾಯಿಗೂ ಮಧ್ಯೆ ಇರುವ ಸೀನ್ ಅರಣ್ಯಕ್ಕೆ ಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರ ಸಮೂಹವೆಲ್ಲಾ ಏಲೀವಿುನಿಂದ ಹೊರಟ ಮೇಲೆ ಅವರು ಐಗುಪ್ತದೇಶವನ್ನು ಬಿಟ್ಟ ಎರಡನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಏಲೀವಿುಗೂ ಸೀನಾಯಿ ಬೆಟ್ಟಕ್ಕೂ ನಡುವೆಯಿರುವ ಸೀನೆಂಬ ಅರಣ್ಯಕ್ಕೆ ಬಂದರು.
Kannada Bible (KNCL) BSI 2016
ಇಸ್ರಯೇಲರ ಸಮಾಜ ಏಲೀಮಿನಿಂದ ಹೊರಟ ಮೇಲೆ, ಏಲೀಮಿಗೂ ಸಿನಾಯಿ ಬೆಟ್ಟಕ್ಕೂ ನಡುವೆಯಿರುವ ‘ಸೀನ್’ ಎಂಬ ಮರುಭೂಮಿಗೆ ಬಂದರು. ಈಜಿಪ್ಟನ್ನು ಬಿಟ್ಟು ಬಂದ ಎರಡನೆಯ ತಿಂಗಳಿನ ಹದಿನೈದನೆಯ ದಿನ ಅದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರ ಸಭೆಯೆಲ್ಲಾ ಏಲೀಮಿನಿಂದ ಪ್ರಯಾಣಮಾಡಿ, ಈಜಿಪ್ಟ್ ದೇಶದಿಂದ ಹೊರಟ ಎರಡನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಏಲೀಮಿಗೂ, ಸೀನಾಯಿ ಪರ್ವತಕ್ಕೂ ಮಧ್ಯೆ ಇರುವ ಸೀನ್ ಮರುಭೂಮಿಗೆ ಬಂದರು.