Exodus 16:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅರೋನನು ಇಸ್ರೇಲರೆಲ್ಲರೊಂದಿಗೆ ಮಾತಾಡಿದನು. ಅವರೆಲ್ಲರೂ ಒಂದು ಸ್ಥಳದಲ್ಲಿ ಕೂಡಿಬಂದರು. ಆರೋನನು ಅವರೊಂದಿಗೆ ಮಾತಾಡುತ್ತಿದ್ದಾಗ ಅವರೆಲ್ಲರೂ ಅರಣ್ಯದ ಕಡೆಗೆ ತಿರುಗಿನೋಡಿದರು. ಮೇಘದಲ್ಲಿ ಯೆಹೋವನ ಮಹಿಮೆಯು ಪ್ರತ್ಯಕ್ಷವಾದದ್ದನ್ನು ಅವರೆಲ್ಲರೂ ಕಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆರೋನನು ಇಸ್ರಾಯೇಲರ ಸಮೂಹಕ್ಕೆಲ್ಲಾ ಈ ಮಾತುಗಳನ್ನು ತಿಳಿಸುತ್ತಿರುವಾಗ, ಅವರು ಮರುಭೂಮಿಯ ಕಡೆಗೆ ನೋಡಲಾಗಿ, ಮೇಘದಲ್ಲಿ ಯೆಹೋವನ ತೇಜಸ್ಸು ಅವರಿಗೆ ಕಾಣಿಸಿತು.
Kannada BSI Bible 2016
ಆರೋನನು ಇಸ್ರಾಯೇಲ್ ಮಕ್ಕಳ ಸಭೆಯ ಸಂಗಡ ಮಾತನಾಡುತ್ತಿದ್ದಾಗ ಅವರು ಅರಣ್ಯದ ಕಡೆಗೆ ನೋಡಿ ದರು. ಆಗ ಇಗೋ, ಕರ್ತನ ಮಹಿಮೆಯು ಮೇಘದಲ್ಲಿ ಪ್ರತ್ಯಕ್ಷವಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆರೋನನು ಇಸ್ರಾಯೇಲ್ಯರ ಸಮೂಹಕ್ಕೆಲ್ಲಾ ಈ ಮಾತುಗಳನ್ನು ತಿಳಿಸುತ್ತಿರುವಾಗ ಅವರು ಅರಣ್ಯದ ಕಡೆಗೆ ನೋಡಲಾಗಿ ಮೇಘದಲ್ಲಿ ಯೆಹೋವನ ತೇಜಸ್ಸು ಅವರಿಗೆ ಕಾಣಿಸಿತು.
Kannada Bible (KNCL) BSI 2016
ಅಂತೆಯೇ ಆರೋನನು ಇಸ್ರಯೇಲರ ಸಮಾಜಕ್ಕೆಲ್ಲ ಈ ಮಾತುಗಳನ್ನು ತಿಳಿಸುತ್ತಿರುವಾಗ ಆ ಜನರು ಮರುಭೂಮಿಯ ಕಡೆಗೆ ನೋಡಿದರು. ಆಗ ಇಗೋ, ಮೇಘದಲ್ಲಿ ಸರ್ವೇಶ್ವರನ ತೇಜಸ್ಸು ಅವರಿಗೆ ಕಾಣಿಸಿತು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆರೋನನು ಇಸ್ರಾಯೇಲರ ಸಭೆಯ ಸಂಗಡ ಮಾತನಾಡುತ್ತಿದ್ದಾಗ ಅವರು ಮರುಭೂಮಿಯ ಕಡೆಗೆ ನೋಡಿದರು. ಆಗ, ಯೆಹೋವ ದೇವರ ಮಹಿಮೆಯು ಮೇಘದಲ್ಲಿ ಪ್ರತ್ಯಕ್ಷವಾಯಿತು.