Exodus 16:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಾನು ಇಸ್ರೇಲರ ಗುಣುಗುಟ್ಟುವಿಕೆಗಳನ್ನು ಕೇಳಿದ್ದೇನೆ. ಆದ್ದರಿಂದ ಅವರಿಗೆ ಹೀಗೆ ಹೇಳು: ‘ಸೂರ್ಯಾಸ್ತ್ತಮದ ಮುನ್ನ ನೀವು ಮಾಂಸವನ್ನು ತಿನ್ನುವಿರಿ; ಪ್ರತಿ ಮುಂಜಾನೆ ಸೂರ್ಯೋದಯದ ಮುನ್ನ ನಿಮಗೆ ಬೇಕಾದಷ್ಟು ರೊಟ್ಟಿಯನ್ನು ತಿನ್ನುವಿರಿ. ಆಗ ನಾನೇ ದೇವರಾದ ಯೆಹೋವನೆಂಬುದನ್ನು ನೀವು ತಿಳಿದುಕೊಳ್ಳುವಿರಿ; ನನ್ನಲ್ಲಿ ಭರವಸೆ ಇಡುವಿರಿ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಇಸ್ರಾಯೇಲರ ಗುಣುಗುಟ್ಟುವಿಕೆಯು ನನಗೆ ಕೇಳಿಸಿತು. ನೀನು ಅವರಿಗೆ, ‘ನೀವು ಸಾಯಂಕಾಲದಲ್ಲಿ ಮಾಂಸವನ್ನೂ, ಮುಂಜಾನೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ತಿನ್ನುವಿರಿ. ಇದರಿಂದ ನಾನು ನಿಮ್ಮ ದೇವರಾದ ಯೆಹೋವನು ಎಂಬುದು ನಿಮಗೆ ಗೊತ್ತಾಗುವುದೆಂದು ಹೇಳಬೇಕು’” ಎಂಬುದೇ.
Kannada BSI Bible 2016
ಇಸ್ರಾಯೇಲ್ ಮಕ್ಕಳ ಗುಣುಗುಟ್ಟು ವಿಕೆಯನ್ನು ಕೇಳಿದ್ದೇನೆ. ಅವರ ಸಂಗಡ ನೀನು ಮಾತ ನಾಡಿ--ನೀವು ಸಾಯಂಕಾಲದಲ್ಲಿ ಮಾಂಸವನ್ನು ಉಣ್ಣು ವಿರಿ, ಬೆಳಿಗ್ಗೆ ರೊಟ್ಟಿಯಿಂದ ತೃಪ್ತರಾಗುವಿರಿ. ನಾನೇ ನಿಮ್ಮ ದೇವರಾದ ಕರ್ತನೆಂದು ತಿಳಿದುಕೊಳ್ಳುವಿರಿ ಎಂದು ಅವರಿಗೆ ಹೇಳು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರ ಗುಣುಗುಟ್ಟುವಿಕೆಯು ನನಗೆ ಕೇಳಿಸಿತು. ನೀನು ಅವರಿಗೆ - ಸಾಯಂಕಾಲದಲ್ಲಿ ಮಾಂಸವನ್ನೂ ಹೊತ್ತಾರೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ತಿನ್ನುವಿರಿ; ಇದರಿಂದ ನಾನು ನಿಮ್ಮ ದೇವರಾದ ಯೆಹೋವನೆಂಬದು ನಿಮಗೆ ಗೊತ್ತಾಗುವದೆಂದು ಹೇಳಬೇಕು ಎಂಬದೇ.
Kannada Bible (KNCL) BSI 2016
ಇಸ್ರಯೇಲರ ಗೊಣಗಾಟ ನನಗೆ ಕೇಳಿಸಿತು. ಅವರಿಗೆ, ‘ಸಂಜೆ ಮಾಂಸವನ್ನೂ ಬೆಳಿಗ್ಗೆ ಬೇಕಾದಷ್ಟು ರೊಟ್ಟಿಯನ್ನೂ ತಿನ್ನುವಿರಿ; ಇದರಿಂದ ನಾನು ನಿಮ್ಮ ದೇವರಾದ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು’ ಎಂದು ಹೇಳು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇಸ್ರಾಯೇಲರ ಗೊಣಗುಟ್ಟುವಿಕೆಯನ್ನು ಕೇಳಿದ್ದೇನೆ. ಅವರ ಸಂಗಡ ನೀನು ಮಾತನಾಡಿ, ‘ನೀವು ಸಂಜೆಯಲ್ಲಿ ಮಾಂಸವನ್ನು ತಿನ್ನುವಿರಿ. ಬೆಳಿಗ್ಗೆ ರೊಟ್ಟಿಯಿಂದ ತೃಪ್ತರಾಗುವಿರಿ. ನಾನೇ ನಿಮ್ಮ ದೇವರಾದ ಯೆಹೋವ ದೇವರೆಂದು ತಿಳಿದುಕೊಳ್ಳುವಿರಿ,’ ಎಂದು ಅವರಿಗೆ ಹೇಳು,” ಎಂದರು.