Exodus 16:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ತಮ್ಮ ಕುಟುಂಬದಲ್ಲಿದ್ದ ಪ್ರತಿಯೊಬ್ಬರ ಆಹಾರವನ್ನು ಒಟ್ಟಾಗಿ ಸೇರಿಸಿ ಅಳತೆಮಾಡಿದಾಗ ಅಲ್ಲಿ ಯಾವಾಗಲೂ ಪ್ರತಿಯೊಬ್ಬನಿಗೆ ಬೇಕಾದಷ್ಟು ಮಾತ್ರ ಆಹಾರವಿರುತ್ತಿತ್ತು. ಅದು ಹೆಚ್ಚಾಗಿಯೂ ಇರುತ್ತಿರಲಿಲ್ಲ; ಕಡಿಮೆಯಾಗಿಯೂ ಇರುತ್ತಿರಲಿಲ್ಲ. ಹೀಗೆ ಪ್ರತಿಯೊಬ್ಬನು ತನಗೆ ಮತ್ತು ತನ್ನ ಕುಟುಂಬಕ್ಕೆ ಬೇಕಾದಷ್ಟನ್ನು ಮಾತ್ರ ಕೂಡಿಸಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಅದನ್ನು ಸೇರಿನಿಂದ ಅಳತೆಮಾಡಿದರು. ಬಹಳ ಕೂಡಿಸಿದವನಿಗೆ ಏನೂ ಹೆಚ್ಚಾಗಲಿಲ್ಲ, ಸ್ವಲ್ಪವಾಗಿ ಕೂಡಿಸಿದವನಿಗೆ ಏನೂ ಕಡಿಮೆಯಾಗಲಿಲ್ಲ. ಪ್ರತಿಯೊಬ್ಬನೂ ತನ್ನ ಭೋಜನಕ್ಕೆ ಸರಿಯಾಗುವಷ್ಟನ್ನು ಕೂಡಿಸಿಕೊಂಡಿದ್ದನು.
Kannada BSI Bible 2016
ಓಮೆರ ದಿಂದ ಅಳತೆ ಮಾಡಿದಾಗ ಹೆಚ್ಚು ಕೂಡಿಸಿದವನಿಗೆ ಮಿಕ್ಕಲಿಲ್ಲ, ಕಡಿಮೆ ಕೂಡಿಸಿದವನಿಗೆ ಕೊರತೆಯಾ ಗಲಿಲ್ಲ, ಒಬ್ಬೊಬ್ಬನು ಊಟಮಾಡುವಷ್ಟು ಅವರು ಕೂಡಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಹಳ ಕೂಡಿಸಿದವನಿಗೆ ಏನೂ ಹೆಚ್ಚಾಗಲಿಲ್ಲ, ಸ್ವಲ್ಪವಾಗಿ ಕೂಡಿಸಿದವನಿಗೆ ಏನೂ ಕಡಿಮೆಯಾಗಲಿಲ್ಲ; ಪ್ರತಿಯೊಬ್ಬನು ತನ್ನ ಭೋಜನಕ್ಕೆ ಸರಿಯಾಗಿಯೇ ಕೂಡಿಸಿಕೊಂಡಿದ್ದನು.
Kannada Bible (KNCL) BSI 2016
ಬಹಳ ಕೂಡಿಸಿದವನಿಗೆ ಏನೂ ಹೆಚ್ಚಾಗಲಿಲ್ಲ, ಸ್ವಲ್ಪವಾಗಿ ಕೂಡಿಸಿದವನಿಗೆ ಏನೂ ಕಡಿಮೆಯಾಗಲಿಲ್ಲ. ಪ್ರತಿಯೊಬ್ಬನು ತನ್ನ ಭೋಜನಕ್ಕೆ ಸರಿಯಾಗಿಯೇ ಕೂಡಿಸಿಕೊಂಡಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಓಮೆರದಿಂದ ಅಳತೆಮಾಡಿದಾಗ, ಅತಿಯಾಗಿ ಕೂಡಿಸಿದವನಿಗೆ ಹೆಚ್ಚಾಗಲಿಲ್ಲ, ಮಿತವಾಗಿ ಕೂಡಿಸಿದವನಿಗೆ ಕೊರತೆಯಾಗಲಿಲ್ಲ. ಒಬ್ಬೊಬ್ಬನು ಊಟಮಾಡುವಷ್ಟು ಅವರು ಕೂಡಿಸಿದರು.